ಮಡಿಕೇರಿ, [ಏ.01]:  ತುಮಕೂರು ಜಿಲ್ಲೆ ತಿಪಟೂರು ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು [ಸೋಮವಾರ] ಮಡಿಕೇರಿಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರು ಮೂಲದ ಚೇತನ್ ಹಾಗೂ ವಾಣಿ ಆತ್ಮಹತ್ಯೆಗೆ ಶರಣಾದ ದಂಪತಿ. ಇವರ ಸಾವಿನಿಂದ ಒಂದುವರೆ ವರ್ಷದ ಪುಟ್ಟ ಕಂದಮ್ಮ ಅನಾಥವಾಗಿರುವ ಹೃದಯ ವಿದ್ರಾವಕ ಘಟನೆ ಕಂಡು ಸ್ಥಳೀಯರು ಕಣ್ಣೀರಿಟ್ಟಿರು.

ಚೇತನ್ ಮಡಿಕೇರಿಯ ಖಾಸಗಿ ಶಾಲೆಯ ಶಿಕ್ಷಕನಾಗಿದ್ದ. ಮೊದಲಿಗೆ ವಾಣಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಗಂಡನಿಗೆ [ಚೇತನ್] ಫೋನ್ ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ವಿಚಾರವನ್ನು ತಿಳಿಸಿದ್ದಾಳೆ.

ಇದ್ರಿಂದ ಆಘಾತಕ್ಕೊಳಗಾದ ಚೇತನ್ ಮನೆಗೆ ಬಂದು ತಾನು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದಕ್ಕೂ ಮೊದಲು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾನೆ.

ಕೂಡಲೇ ಚೇತನ್ ಪೋಷಕರು ಮಡಿಕೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಅನ್ವಯ ಪೊಲೀಸರು ಸ್ಥಳಕ್ಕೆ ಹೋಗುವಷ್ಟರಲ್ಲಿಯೇ ಚೇತನ್ ಸಾವನ್ನಪ್ಪಿದ್ದ. ಆದ್ರೆ ಈ ದಂಪತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.