ಕೋಲಾರ(ನ.09): ಅಯೋಧ್ಯೆ ತೀರ್ಪು ಪ್ರಕಟವಾಗುವದ ಹಿನ್ನೆಲೆಯಲ್ಲಿ ಕೋಲಾರದ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಭದ್ರತೆ ನೀಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ ರಾತ್ರಿ 11 ಗಂಟೆವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಮಾಹಿತಿ ಕೊರತೆಯಿಂದ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ರಾತ್ರಿ 11 ಗಂಟೆವರೆಗೂ 144 ಸೆಕ್ಷನ್ ಜಾರಿಮಾಡಿದ್ದು, ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಮಾಹಿತಿ ಇಲ್ಲದೆ ಬಂದಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳು ವಾಪಸ್ಸಾಗಿದ್ದಾರೆ.

ಕೊಡಗು: ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಮದ್ಯ ಮಾರಾಟವಿಲ್ಲ

ಬೆಳಗ್ಗೆ 7 ಗಂಟೆ ಬಳಿಕ ಬಂದೋಬಸ್ತ್ ನಿಯೋಜಿಸಲು ಜಿಲ್ಲಾಧಿಕಾರಿ ಮಂಜುನಾಥ್ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಹಾಗೂ ಕೆಜಿಎಫ್ ಎಸ್ಪಿ ಮೊಹ್ಮಮದ್ ಸುಜೀತಾ ಅವರಿಗೆ ಸೂಚನೆ ನೀಡಿದ್ದಾರೆ. 3 KSRP,4 ಡಿ ಆರ್ ಪೊಲೀಸರನ್ನು ನಿಯೋಜನೆಗೆ ಸಿದ್ಧತೆ ನಡೆಸಲಾಗಿದೆ. ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಹದ್ದಿನ ಕಣ್ಣು ಇಡಲಾಗಿದ್ದು, ಬಂದೋಬಸ್ತ್‌ಗೆ  ಪೊಲೀಸರು ನಿಯೋಜಿಸಲ್ಪಟ್ಟಿದ್ದಾರೆ.ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದ್ದು. 3 KSRP ,4 DR ಪೊಲೀಸ್ ತುಕ್ಕಡಿ ಸೇರಿದಂತ್ತೆ 600 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ರಾಜ್ಯದಲ್ಲಿ ಭಾರೀ ಕಟ್ಟೆಚ್ಚರ : ಜನರಿಗೆ ಪೊಲೀಸರ ಸೂಚನೆಗಳೇನು?