ದೇಶಾದ್ಯಂತ ಬುಧವಾರ 200ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಇಂಡಿಗೋ ಏರ್ಲೈನ್ಸ್ ರದ್ದುಗೊಳಿಸಿದ ಪರಿಣಾಮ ಹುಬ್ಬಳ್ಳಿಯಲ್ಲಿ ನಡೆಯಬೇಕಾಗಿದ್ದ ನೂತನ ವಧು-ವರರ ಆರತಕ್ಷತೆ ಸಮಾರಂಭಕ್ಕೆ ಮದುಮಕ್ಕಳೇ ಬರಲು ಆಗದೆ, ಆನ್ಲೈನ್ ಮೂಲಕವೇ ಆರತಕ್ಷತೆ ನಡೆಸಿದ ಅಪರೂಪದ ಪ್ರಸಂಗ ನಡೆದಿದೆ.
ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ಕಟ್ಟುನಿಟ್ಟಾಗಿ ತಡೆಯಲು ಮುಂದಾಗಿರುವ ರಾಜ್ಯ ಸರ್ಕಾರ, ಅಂತಹ ಕ್ರಮ ಎಸಗಿದವರಿಗೆ 1 ಲಕ್ಷ ರು. ದಂಡ ಹಾಗೂ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಮಸೂದೆ-2025’ಗೆ ಅನುಮೋದನೆ ಪಡೆದಿದೆ.
ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಭ್ರಷ್ಟಾಚಾರದ ಕುರಿತು ನೀಡಿರುವ ಹೇಳಿಕೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಆರ್.ಅಶೋಕ್ ಅವರು ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ
ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತರು ಹೇಳಿದ್ದಾರೆ. ಹೀಗಾಗಿ, ಈ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
ಅಮೆರಿಕಕ್ಕೆ ಬರುವವರಿಗೆ ನೀಡಲಾಗುವ ಎಚ್-1ಬಿ ಹಾಗೂ ಅವರ ಜತೆ ಆಗಮಿಸುವವರಿಗೆ ಕೊಡಲಾಗುವ ಎಚ್-4 ವೀಸಾಗೆ ಸಂಬಂಧಿಸಿದಂತೆ ಕಠಿಣ ನಿಯಮ ಜಾರಿಗೆ ತರುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಎಲ್ಲಾ ಅರ್ಜಿದಾರರಿಗೆ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ಸಾರ್ವಜನಿಕಗೊಳಿಸುವಂತೆ ಸೂಚಿಸಿದ್ದಾರೆ.
ಆರ್ಥಿಕವಾಗಿ ಭಾರೀ ಸಂಕಷ್ಟಕ್ಕೆ ಸಿಲುಕಿಕೊಂಡು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯಿಂದ ಸಾಲಕ್ಕೆ ಕೈಚಾಚಿದ್ದ ಪಾಕಿಸ್ತಾನ, ಇದೀಗ ಅದೇ ಐಎಂಎಫ್ನ ಷರತ್ತಿನಂತೆ ತನ್ನ ಒಡೆತನದ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ (ಪಿಐಎ) ಅನ್ನೇ ಮಾರಲು ಮುಂದಾಗಿದೆ.
ಭಾರತ- ರಷ್ಯಾ ಸಂಬಂಧಕ್ಕೆ ಹುಳಿ ಹಿಂಡಲು ಅಮೆರಿಕ ಯತ್ನಿಸುತ್ತಿರುವ ಹೊತ್ತಿನಲ್ಲೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ 2 ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಬಂದಿಳಿದರು. ಈ ವೇಳೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ವಿಮಾನ ನಿಲ್ದಾಣಕ್ಕೆ ತೆರಳಿ ತಮ್ಮ ಆತ್ಮೀಯ ಮಿತ್ರನನ್ನು ಆಲಿಂಗಿಸಿ ಸ್ವಾಗತಿಸಿದರು.
ಸಿಬ್ಬಂದಿ ಕೊರತೆಯಿಂದಾಗಿ ಇಂಡಿಗೋ ಗುರುವಾರವೂ ತನ್ನ 550ಕ್ಕೂ ಅಧಿಕ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿದೆ. ಜತೆಗೆ ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು 2ನೇ ದಿನವೂ ಪರದಾಡುವಂತಾಗಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ರೀತಿ ಮಸೀದಿ ನಿರ್ಮಿಸುತ್ತೇನೆ ಎಂದಿದ್ದ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ರನ್ನು ಟಿಎಂಸಿ ಪಕ್ಷದಿಂದ ವಜಾ ಮಾಡಲಾಗಿದೆ.
ಬಾಲಯ್ಯ ನಟನೆಯ ಅಖಂಡ 2 ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಈ ಚಿತ್ರದ ಪ್ರೀಮಿಯರ್ ಶೋಗಳನ್ನು ರದ್ದುಗೊಳಿಸಲಾಗಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ. ಅಖಂಡ 2 ಪ್ರೀಮಿಯರ್ ಶೋಗಳು ಯಾಕೆ ದಿಢೀರ್ ರದ್ದಾದವು ಎಂಬ ವಿವರ ಇಲ್ಲಿದೆ.