ಬೆಳಗಾವಿ: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಸಿಬಿ ಪಾರ್ಟಿ ಮೂಲಕ ಚುನಾವಣೆಗೆ ಸ್ಪರ್ಧಿಸಿ 143 ಸ್ಥಾನಗಳ ಬಹುಮತದೊಂದಿಗೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿಯ ಭೋಜರಾಜ ಕ್ರೀಡಾಂಗಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಭಾರತ ಹಿಂದೂ ರಾಷ್ಟ್ರವಾಗಿ ಉಳಿಯಬೇಕಾದರೆ ಛತ್ರಪತಿ ಶಿವಾಜಿ ಮಹಾರಾಜ ಮತ್ತು ರಾಣಾ ಪ್ರತಾಪ್ ಸಿಂಹರಂತಹ ಆಡಳಿತ ಅನಿವಾರ್ಯವಾಗಿದೆ. ಇರುವ ಆಡಳಿತ ಪಕ್ಷವೇ ಇರಲಿ, ವಿರೋಧ ಪಕ್ಷವೇ ಇರಲಿ, ನಾನು ಇರುವ ಸತ್ಯ ಹೇಳುತ್ತೇನೆ. ಹೀಗಾಗಿ ನಾನು ವಿವಾದಾತ್ಮಕ ಹೇಳಿಕೆ ನೀಡುತ್ತೇನೆಂದು ಬಿಜೆಪಿಯವರು ಉಚ್ಛಾಟನೆ ಮಾಡಿದ್ದಾರೆ.