ಮುಖ್ಯಮಂತ್ರಿ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ತಿಕ್ಕಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರವೇ ಮದ್ದು ನೀಡಬಹುದು ಎಂಬ ಊಹಾಪೋಹಗಳ ನಡುವೆಯೇ, ‘ಇದು ಸ್ಥಳೀಯ ಸಮಸ್ಯೆ, ಇದನ್ನು ಸ್ಥಳೀಯ ನಾಯಕರೇ ಇತ್ಯರ್ಥಪಡಿಸಿಕೊಳ್ಳಬೇಕು’ ಎಂದು ಮಲ್ಲಿಕಾರ್ಜನ ಖರ್ಗೆ ಹೊಸ ‘ಬಾಂಬ್’ ಸಿಡಿಸಿದ್ದಾರೆ.
‘ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್ಎಸ್ಎಸ್) ಯಾವುದೇ ರಾಜಕೀಯ ಕಾರ್ಯಸೂಚಿ ಇಲ್ಲ. ಸಂಘವನ್ನು ಬಿಜೆಪಿಯ ಕಣ್ಣಿನಿಂದ ನೋಡುವುದು ದೊಡ್ಡ ತಪ್ಪು. ದಾರಿ ತಪ್ಪಿಸುವ ಕೆಲವು ಅಭಿಯಾನಗಳಿಂದಾಗಿ ಒಂದು ವರ್ಗದ ಜನರಲ್ಲಿ ಸಂಘಟನೆಯ ಬಗ್ಗೆ ತಪ್ಪು ಕಲ್ಪನೆಗಳಿವೆ’ ಡಾ. ಮೋಹನ್ ಭಾಗ್ವತ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಹಾರದ ನಿತಿನ್ ನಬೀನ್ ಅವರಿಗೆ ರಾಜ್ಯಸಭೆಗೆ ಪದೋನ್ನತಿ ನೀಡಲು ಪಕ್ಷದ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಬಂಕಿಪುರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಮುಂದಾಗಿದೆ ಎಂದು ವರದಿಯಾಗಿದೆ.
ಇಸ್ಲಾಂ ಧರ್ಮ ಅವಹೇಳನ ಆರೋಪಕ್ಕಾಗಿ ಬಾಂಗ್ಲಾದ ಭಾಲುಕ ಎಂಬಲ್ಲಿ ಬರ್ಬರವಾಗಿ ಹತ್ಯೆಯಾದ ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಹಾಗೆ ಮಾಡಿದ್ದ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಮತಾಂಧರ ಬಣ್ಣ ಮತ್ತೊಮ್ಮೆ ಬಯಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಭಾನುವಾರ ಕೇರಳದಲ್ಲಿ ಸಾಂಪ್ರದಾಯಿಕ ಪೂಜಾ ವಿಧಾನ ಮೂಲಕ ಆರಂಭವಾಗಿದೆ. ಪೂಜಾ ಕಾರ್ಯಕ್ರಮದ ಫೋಟೋ, ವಿಡಿಯೋವನ್ನು ಚಿತ್ರತಂಡ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.
ಮಹಾರಾಷ್ಟ್ರದ ಮುನಿಸಿಪಲ್ ಮತ್ತು ನಗರ ಪಂಚಾಯತ್ಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ್ದರೆ, ವಿಪಕ್ಷ ಮಹಾ ಅಘಾಡಿ ಕೂಟಕ್ಕೆ ಹೀನಾಯ ಸೋಲಾಗಿದೆ
ಪ್ರಯಾಣಿಕರ ರೈಲುಗಳ ಟಿಕೆಟ್ ದರವನ್ನು ಅಲ್ಪ ಪ್ರಮಾಣದಲ್ಲಿ ಹೆಚ್ಚಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. 215 ಕಿ.ಮೀಗಿಂತ ದೂರದ ಸಾಮಾನ್ಯ ರೈಲು ದರ 1 ಪೈಸೆ ಹೆಚ್ಚಳವಾಗಲಿದೆ. ಜೊತೆಗೆ ಎ.ಸಿ ಮತ್ತು ಎ.ಸಿ ಸೌಲಭ್ಯ ಇಲ್ಲದ ಮೇಲ್, ಎಕ್ಸ್ಪ್ರೆಸ್ ರೈಲುಗಳಲ್ಲಿ ದರ ಏರಿಕೆ ಪ್ರತಿ ಕಿ.ಮೀಗೆ 2 ಪೈಸೆ ಇರಲಿದೆ.
ಫ್ಯಾಸ್ಟ್ಯಾಗ್ಗಳಿಲ್ಲದೆ ಟೋಲ್ಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ವಿಧಿಸಲಾಗುವ ದಂಡ ಸಂಗ್ರಹದಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2024- 25ನೇ ಸಾಲಿನ ಅವಧಿಯಲ್ಲಿ ಕರ್ನಾಟಕದಲ್ಲಿ 130 ಕೋಟಿ ರು. ದಂಡ ಸಂಗ್ರಹವಾ ಗಿದೆ.
ಐಬಿಎಂ ಸಂಸ್ಥೆಯು ಭಾರತದ 50 ಲಕ್ಷ ಯುವ ಜನರಿಗೆ ಕೃತಕ ಬುದ್ಧಿಮತ್ತೆ (ಎಐ), ಸೈಬರ್ ಸೆಕ್ಯುರಿಟಿ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್ ನಲ್ಲಿ ಕೌಶಲ್ಯ ತರಬೇತಿ ನೀಡುವ ಮಹತ್ವದ ಯೋಜನೆಯನ್ನು ಘೋಷಿಸಿದೆ. ಈ ಕುರಿತ ವರದಿ ಇಲ್ಲಿದೆ.
ತುಮಕೂರಿಗೆ ಮೆಟ್ರೋ ವಿಸ್ತರಿಸುವ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಿನ ಐದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಪಡೆಯಲಿದೆ. ಸದ್ಯ ನಮ್ಮ ಮೆಟ್ರೋ ಹಸಿರು ಮಾರ್ಗದ (33.5 ಕಿ.ಮೀ.) ಮಾದಾವರ (ಬಿಐಇಸಿ) ನಿಲ್ದಾಣದಲ್ಲಿ ಕೊನೆಗೊಳ್ಳುತ್ತಿದೆ.