ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ, ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ 3ನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗೆಲುವು ದಾಖಲಿಸಿದೆ.
ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಕೇವಲ ರಸ್ತೆ, ಚರಂಡಿ ನಿರ್ಮಾಣದಿಂದ ಬಡವರ ಉದ್ದಾರ ಸಾಧ್ಯವಿಲ್ಲ, ಸಾವಿರಾರು ವರ್ಷಗಳ ಶೋಷಣೆ ಕೊನೆಗಾಣಿಸಲು ಗ್ಯಾರಂಟಿಗಳು ಅವಶ್ಯಕ ಎಂದರು.
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶೋಕಾಚರಣೆ ಹಾಗೂ ನಾಯಕರ ಗೌರವಾರ್ಥ ಶಾಲೆಗಳಿಗೆ ರಜೆ ನೀಡಲಾಗಿದೆ.
ಹಿರಿಯ ರಾಜಕಾರಣಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಕಾಶಿ ಜಗದ್ಗುರು ಡಾ.ಚಂದ್ರಶೇಖರ್ ಶಿವಾಚಾರ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಿದ್ದಾರೆ.
ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ, ಸಣ್ಣ ಸೇತುವೆಗೆ ಡಿಕ್ಕಿ ಹೊಡೆದ ಕಾರು ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ. ತಹಶಿಲ್ದಾರ್ ಕಚೇರಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ನಟ ಶಾರುಖ್ ಖಾನ್ ಹೆಸರಿನಲ್ಲಿ ದುಬೈನಲ್ಲಿನಲ್ಲಿ ನಿರ್ಮಿಸುತ್ತಿರುವ ವಾಣಿಜ್ಯ ಗೋಪುರವನ್ನು ಕೆಲವೇ ವಾರಗಳಲ್ಲಿ ₹5,000 ಕೋಟಿಗೆ ಸಂಪೂರ್ಣವಾಗಿ ಮಾರಾಟ ಮಾಡಿದೆ. ಈ ಯೋಜನೆಯು ವಾಣಿಜ್ಯ ದರ್ಜೆ-ಎ ಕಚೇರಿ ಸ್ಥಳಗಳ ಮೇಲಿನ, ಭಾರತೀಯ ಹೂಡಿಕೆದಾರರ ಅಗಾಧ ಬೇಡಿಕೆಯನ್ನು ಸಾಬೀತುಪಡಿಸಿದೆ.
ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ನಿಧನ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ತಿರುಪತಿ ಯಾತ್ರೆಯಲ್ಲಿದ್ದ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪ್ರಯಾಣ ರದ್ದುಗೊಳಿಸಿ ಹಿಂತಿರುಗುತ್ತಿದ್ದು, ಪಾರ್ಥಿವ ಶರೀರ ದಾವಣಗೆರೆಗೆ ರವಾನಿಸಲು ಸಿದ್ಧತೆ
ಹೊಸಕೋಟೆಗೆ ಮೆಟ್ರೋ ಸಂಪರ್ಕ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇದರೊಂದಿಗೆ, ನಮ್ಮ ಮೆಟ್ರೋ ಜಾಲವನ್ನು 175 ಕಿ.ಮೀ.ಗೆ ವಿಸ್ತರಿಸಲಾಗುತ್ತಿದ್ದು, ಗುಲಾಬಿ, ನೀಲಿ ಸೇರಿದಂತೆ ಹೊಸ ಮಾರ್ಗಗಳಲ್ಲಿ ಚಾಲಕ ರಹಿತ ರೈಲುಗಳನ್ನು ಪರಿಚಯಿಸಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ.
ಬಿಗ್ ಬಾಸ್ ಮನೆಯಲ್ಲಿ ಕ್ಯೂಟ್ ಜೋಡಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಸಂಬಂಧದ ಬಗ್ಗೆ ಎಲ್ಲರಿಗೂ ಗೊಂದಲವಿದೆ. ಇದೀಗ ಗಿಲ್ಲಿ ನಟ ಮೇಕಪ್ ಕೋಣೆಯಲ್ಲಿ ಕಾವ್ಯಾಗೆ 'ಐ ಲವ್ ಯು' ಎಂದು ಹೇಳಿ ಪ್ರೀತಿ ನಿವೇದನೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾವ್ಯಾ ಅಚ್ಚರಿ ಮತ್ತು ನಗುವಿನಿಂದ ಪ್ರತಿಕ್ರಿಯಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕುಲಶಾಸ್ತ್ರ ಅಧ್ಯಯನವಿಲ್ಲದೆ ಸೇರ್ಪಡೆ ಸಾಧ್ಯವೇ? ಒಬಿಸಿಯಿಂದ ಎಸ್ಟಿಗೆ ಬರುವಾಗ ಅವರ ಮೀಸಲಾತಿ ಪಾಲನ್ನೂ ತರಬೇಕು ಎಂಬ ಷರತ್ತನ್ನು ಮುಂದಿಟ್ಟಿದ್ದಾರೆ.