ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸುವು ಹೇಗೆ..?

ಮೋದಕ  ಗಣೇಶನಿಗೆ ಅತ್ಯಂತ ಪ್ರಿಯವಾದುದಾಗಿದೆ. ಆದ್ದರಿಂದ ಗಣೇಶ ಚತುರ್ಥಿಯಂದು ಇದನ್ನು ಎಲ್ಲರ ಮನೆಯಲ್ಲಿಯೂ ತಯಾರು ಮಾಡುತ್ತಾರೆ. ಆದರೆ ಅದನ್ನು ತಯಾರಿ ಮಾಡುವ ವಿಧಾನ ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.

ಬೇಕಾಗುವ ಸಾಮಾಗ್ರಿ

 • ಒಂದೂವರೆ ಕಪ್ ತೆಂಗಿನ ಹಾಲು 
 • ಗೋಡಂಬಿ
 • ಚಿರೋಟಿ ರವೆ ಅಥವಾ ಅಕ್ಕಿ ಹಿಟ್ಟು
 • ಸ್ವಲ್ಪ ಗೋದಿ ಹಿಟ್ಟು
 • ತೆಂಗಿನ ಹಾಲು ಅಥವಾ ತೆಂಗಿನ ನೀರು
 • ಪಿಸ್ತಾ
 • ಏಲಕ್ಕಿ
 • ಬೆಲ್ಲ
 • ತುಪ್ಪ
 • ಚಿಟಿಕೆ ಉಪ್ಪು
 • ತೆಂಗಿನ ಹೂರ್ಣ

 

ಮಾಡುವ ವಿಧಾನ

ಕಡಿಮೆ ಉರಿಯಲ್ಲಿ ನೀರು ಕುದಿಸಿ ಅದರಲ್ಲಿ ಅಕ್ಕಿ ಹಿಟ್ಟು ಅಥವಾ ಚಿರೋಟಿ ರವೆ ಸ್ವಲ್ಪ ಗೋದಿ ಹಿಟ್ಟು ಹಾಕಿ  ಸ್ವಲ್ಪ ಬೇಯಿಸಿಕೊಳ್ಳಿ. ಅದಕ್ಕೆ  ತೆಂಗಿನ ಹಾಲು ಅಥವಾ ತೆಂಗಿನ ನೀರನ್ನು ಅಲ್ಪ ಪ್ರಮಾಣದಲ್ಲಿ ಹಾಕಿ ಮಿಕ್ಸ್ ಮಾಡಿ ಕಟ್ಟಿಯಾಗಿ ನಾದಿಕೊಳ್ಳಿ. ಕಾಯಿ ಹಾಲು ಅಥವಾ ಕಾಯಿ ನೀರು ಹಾಕಿ ಹಿಟ್ಟನ್ನು ಕಲಸಿಕೊಂಡರೆ, ಮೋದಕ ಕ್ರಿಸ್ಪಿಯಾಗಿರುತ್ತದೆ.

ನಂತರ ತೆಂಗಿನ ಕಾಯಿ ತುರಿಗೆ ಬೆಲ್ಲವನ್ನು ಹಾಕಿ, ಪಿಸ್ತಾ, ಗೋಡಂಬಿ ಹಾಕಿ ಬೇಯಿಸಿ ಹೂರ್ಣ ತಯಾರಿಸಿಕೊಳ್ಳಿ

ಮಿಕ್ಸ್ ಮಾಡಿದ ಹಿಟ್ಟು ಸಣ್ಣದಾಗಿ ಲಟ್ಟಿಸಿ ಅದಕ್ಕೆ ಕಾಯಿ ಹೂರ್ಣ ತುಂಬಿ ಮೋದಕ ತಯಾರಿಸಿಕೊಳ್ಳಿ. ನಂತರ ಕಾದ ಎಣ್ಣೆಗೆ ಹಾಕಿ. ತುಸು ಬ್ರೌನ್ ಬಣ್ಣಕ್ಕೆ ಬರುವ ತನಕ ಮಂದ ಉರಿಯಲ್ಲಿ ಕರಿದರೆ ಗಣೇಶನಿಗೆ ಪ್ರಿಯವಾದ ಮೋದಕ ಸಿದ್ಧ.