Asianet Suvarna News Asianet Suvarna News

ನಾಯಿ ಸಾಕೋದ್ರಿಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

Scientist says Owning a dog could boost heart health
Author
Bengaluru, First Published Sep 16, 2019, 12:15 PM IST

ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ಕಾಗೆಗಳ ಶವ ಸಂಭೋಗ: ಇದೆಂತಾ ವಿಚಿತ್ರ ನಡುವಳಿಕೆಯ ಪ್ರಯೋಗ!

ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ ನಾಯಿಯನ್ನು ಹೊರಗಡೆಗೆ ಕರೆದುಕೊಂಡು ಹೋಗುವ ನೆವದಲ್ಲಾದರೂ ಅದರ ಯಜಮಾನ ಅಥವಾ ಮನೆಯವರು ಒಂದಷ್ಟು ವಾಕ್ ಮಾಡುತ್ತಾರೆ. ನಾಯಿ ಓಡಿದರೆ ಅವರೂ ಓಡುತ್ತಾರೆ. ಇದರಿಂದ ದೈಹಿಕ ಚಟುವಟಿಕೆ ಸಿಗುತ್ತದೆ. ಜತೆಗೆ ಮನಸ್ಸಿಗೆ ಒಂದಷ್ಟು ಆನಂದವೂ ಸಿಗುತ್ತದೆ.

ಹೃದಯಕೂ ಮನಸಿಗೂ ಸಂಬಂಧ ಉಂಟೇ?

ಇದರಿಂದ ದೇಹಕ್ಕೆ, ಹೃದಯಕ್ಕೆ ಬಹಳಷ್ಟು ಲಾಭವಾಗುತ್ತದೆ ಎಂದು ಹೇಳಲಾಗಿದೆ. ಹಾಗೆಯೇ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದೂ ಹೇಳಿದ್ದಾರೆ. ಸೈಂಟ್ ಅನ್ನೆ ವಿವಿಯ ಸಂಶೋಧಕರ  ತಂಡ 2 ಸಾವಿರ ಮಂದಿಯನ್ನು ನಾಯಿ ಹೊಂದಿದವರು ಮತ್ತು ಹೊಂದದವರು ಎಂದು ಪ್ರತ್ಯೇಕಿಸಿ ಸಮೀಕ್ಷೆ ನಡೆಸಿ ಈ ಅಭಿಪ್ರಾಯಕ್ಕೆ ಬಂದಿದೆ.

ವೈಜ್ಞಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡವರೆಲ್ಲ 24 ರಿಂದ 65 ವರ್ಷ ವಯಸ್ಸಿನವರು. ಇವರಿಗೆ ಹೃದಯದ ಸಮಸ್ಯೆಯಿದ್ದು, ನಾಯಿಯನ್ನು ವಾಕಿಂಗ್ ಮಾಡಿಸುವ, ಅದರೊಂದಿಗೆ ಆಡುವ ಇತ್ಯಾ ದಿ ಕ್ರಿಯೆಗಳಿಂದ ಹೃದಯ ಹೆಚ್ಚು ಗೆಲುವಾಗಲು ಕಾರಣವಾಗಿದೆ ಎಂದು ಹೇಳಿದ್ದಾರಂತೆ.

 

Follow Us:
Download App:
  • android
  • ios