ಮಂಡ್ಯ [ಅ.18]: ಜೆಡಿಎಸ್  ಭದ್ರಕೋಟೆ ಭೇದಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಂಟ್ರಿಯಾಗಿದ್ದಾರೆ. 

ಮಂಡ್ಯದಲ್ಲಿ ಖಾತೆ ತೆರೆಯಲು ಬಿಜೆಪಿ ಸರ್ಕಸ್ ನಡೆಸುತ್ತಿದ್ದು, ಇಲ್ಲಿನ ಕಾರ್ಯಕಾರಿಣಿ ಸಭೆಯಲ್ಲಿ ಕಟೀಲ್ ಪಾಲ್ಗೊಂಡಿದ್ದಾರೆ. ಅಲ್ಲದೇ ಬಿಜೆಪಿ ಗೆಲ್ಲಿಸಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ.

ಮಂಡ್ಯದ ಗಾಯತ್ರಿ ಸಭಾಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದು, ಎಲ್ಲಾ ಕ್ಷೇತ್ರದಲ್ಲೂ ಪಕ್ಷ ಸಂಘಟನೆ ಕುರಿತು ನಳಿನ್ ಕುಮಾರ್ ಕಟೀಲ್ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಕಾರ್ಯಕಾರಿಣಿ ಸಭೆ ಬಳಿಕ ಕೋರ್ ಕಮಿಟಿ ಸಭೆಯನ್ನೂ ನಡೆಸಲಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಾರಾಯಣ ಗೌಡ ಅನರ್ಹತೆಯಿಂದ ಇಲ್ಲಿ ಕೆ ಆರ್ ಪೇಟೆ ಕ್ಷೇತ್ರ ತೆರವಾಗಿದ್ದು, ಇಲ್ಲಿ ಶೀಘ್ರ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಗೆಲ್ಲಿಸಲು ನಾಯಕರು ಬಿಗ್ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ.