ಮಂಡ್ಯ(ಅ.11): ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದ ನಾಗಮಂಗಲದಲಲ್ಲಿರುವ ಕಾಂಗ್ರೆಸ್ ಕಚೇರಿಗೆ ಇಂದು ಭೇಟಿ ನೀಡಲಿದ್ದಾರೆ.

ಶನಿವಾರ ಬೆಳಗ್ಗೆ ನಾಗಮಂಗಲದಲ್ಲಿ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, ನಂತರ ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ನಂತರ ನಾಗಮಂಗಲ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡಿರುವ ಅವರು ತಾಲೂಕು ಮಟ್ಟದ ಅಧಿಕಾರಿಗಳ ಜೊತರ ಸಭೆ ನಡೆಸಲಿದ್ದಾರೆ. ನಂತರ ಸಾರ್ವಜನಿಕರಿಂದ ಸಹವಾಲು ಸ್ವೀಕರಿಸಲಿದ್ದಾರೆ.

ಅಚ್ಚರಿಗೆ ಕಾರಣವಾದ ಸುಮಲತಾ ನಡೆ : ಬಿಜೆಪಿ ಸೇರುತ್ತಾರಾ ಸುಮಲತಾ?

ಇತ್ತೀಚೆಗಷ್ಟೇ ಬಿಜೆಪಿ ಮುಖಂಡರನ್ನು ಸುಮಲತಾ ಅವರು ಭೇಟಿ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಮುಖಂಡರಿಂದ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಇದೀಗ ಸುಮಲತಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುತ್ತಿರುವುದು ವಿಶೇಷ.

ರೆಬೆಲ್ ಸ್ಟಾರ್ ಮನೆಯಲ್ಲಿ ಅಬ್ಬರಿಸಿದ ಐರಾ