ಮಂಡ್ಯ [ಅ.09]: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ನಡೆ ಇದೀಗ ಅಚ್ಚರಿಗೆ ಕಾರಣವಾಗಿದೆ. 

ಮಂಡ್ಯದ ಬಿಜೆಪಿ ಕಚೇರಿಗೆ ಸಂಸದೆ ಸುಮಲತಾ ಅಂಬರೀಶ್ ಆಗಮಿಸಿದ್ದು, ಕೋರ್ ಕಮಿಟಿ ಹಾಗೂ ಸದಸ್ಯರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಉಪ ಸ್ಥಿತಿಯಲ್ಲಿ ಮಂಡ್ಯ ಬಿಜೆಪಿ ಕಚೇರಿಯಲ್ಲಿನ ಸಭೆಗೆ ಸುಮಲತಾ ಆಗಮಿಸಿದ್ದು, ಇದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಲ್ಲದೇ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಪಡೆದಿದ್ದ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಹುಟ್ಟಿಕೊಂಡಿದೆ. 

ಕಳೆದ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎದುರಾಳಿಯಾಗಿ ಸ್ಪರ್ಧಿಸಿದ್ದ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಇದೀಗ ಬಿಜೆಪಿ ಸಭೆಯಲ್ಲಿ ಪಾಲ್ಗೊಂಡಿರುವುದು ಹೆಚ್ಚು ಕುತೂಹಲ ಸೃಷ್ಟಿ ಮಾಡಿದೆ.