ಮೈಸೂರು(ಅ.27): ಬಿಜೆಪಿಯಿಂದ ನನಗೆ ಪಕ್ಷ ಸೇರಲು ಆಹ್ವಾನ ಬಂದಿದೆ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಅಭಿಮಾನಿಗಳ ಸಭೆ ನಡೆಸುತ್ತಿದ್ದೇನೆ. ಇನ್ನೊಂದು ವಾರದಲ್ಲಿ ಸ್ಪಷ್ಟತೀರ್ಮಾನ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನನಗೆ ನೀಡಿರುವ ಆಹ್ವಾನ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ.

ಮರಳಿ ಬಿಜೆಪಿ ಸೇರಿ, ನಾವು ಬರ್ತೀವಿ: ಸಿದ್ದು ಆಪ್ತನಿಗೆ ಅಭಿಮಾನಿಗಳ ಒತ್ತಾಯ

ಬದಲಾದ ರಾಜಕೀಯದಲ್ಲಿ ಬದಲಾವಣೆ ನನ್ನ ಪಾಲಿಗೆ ಅಳಿವು- ಉಳಿವಿನ ಪ್ರಶ್ನೆಯಾಗಿದೆ. ರಾಜಕೀಯದಲ್ಲಿ ಎಲ್ಲ ಸಂದರ್ಭದಲ್ಲೂ ನಮ್ಮ ಎಲ್ಲ ನಿರ್ಧಾರಗಳು ಫಲ ನೀಡುವುದಿಲ್ಲ. ಕಾಂಗ್ರೆಸ್‌ ಸೇರಿದ ತೀರ್ಮಾನದ ಲೆಕ್ಕವೂ ಈಗ ಫಲ ಕೊಡಲಿಲ್ಲ. ರಾಜಕಾರಣಿ ಎಷ್ಟುವರ್ಷ ಮನೆಯಲ್ಲಿ ಕೂರಲು ಸಾಧ್ಯ ಹೇಳಿ? ಹೀಗಾಗಿ ಬದಲಾವಣೆ ಬಯಸಿ ಅಭಿಮಾನಿಗಳ ಅಭಿಪ್ರಾಯ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೈಸೂರು: ಹಾರಂಗಿ ನಾಲೆ ಮೂಲಕ ಕೆರೆಕಟ್ಟೆಗಳಿಗೆ ನೀರು

ಹುಣಸೂರು ಉಪಚುನಾವಣೆ ದೃಷ್ಟಿಯಿಂದ ಇಂತಹ ತೀರ್ಮಾನ ಕೈಗೊಳ್ಳುತ್ತಿಲ್ಲ. ಒಂದು ರಾಷ್ಟ್ರೀಯ ಪಕ್ಷಕ್ಕೆ ಷರತ್ತು ಹಾಕಿ ಸೇರಲು ಆಗುವುದಿಲ್ಲ. ಒಂದು ವಾರದಲ್ಲಿ ಸ್ಪಷ್ಟತೀರ್ಮಾನಕ್ಕೆ ಬರುತ್ತೇನೆ. ಬಿಜೆಪಿ ಸೇರುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್‌ ಯಾಕೆ ಬಿಟ್ಟೆ, ಅಲ್ಲಿನ ಪರಿಸ್ಥಿತಿ ಏನಾಗಿದೆ ಅನ್ನೋದನ್ನು ವಿವರಿಸುತ್ತೇನೆ ಎಂದು ತಿಳಿಸಿದ್ದಾರೆ.