ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಹೈ ಅಲರ್ಟ್‌ ಘೋಷಿಸಲಾಗಿದೆ. ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ.

ಮೈಸೂರು(ಅ. 22): ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಹೈ ಅಲರ್ಟ್‌ ಘೋಷಿಸಲಾಗಿದೆ. ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ.

ಶ್ವಾನ ದಳ, ಬಾಂಬ್‌ ನಿಷ್ಕ್ರಿಯ ದಳದೊಂದಿಗೆ ರೈಲ್ವೆ ಪೊಲೀಸರು ಮತ್ತು ಮೈಸೂರು ನಗರ ಪೊಲೀಸರು ತಪಾಸಣಾ ಕಾರ್ಯ ನಡೆಸುತ್ತಿದ್ದು, ಯಾವುದೇ ಅನಾಹುತ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟವಾಗಿರುವ ಸುದ್ದಿ ಪ್ರಕಟವಾಗುತ್ತಿದ್ದಂತೆ ಅಲರ್ಟ್‌ ಆದ ರೈಲ್ವೆ ಪೊಲೀಸರು ಬಾಂಬ್‌ ಮತ್ತು ಶ್ವಾನದಳದೊಂದಿಗೆ ನಿಲ್ದಾಣದ ಆವರಣದಲ್ಲಿನ ಪ್ರಯಾಣಿಕರು ಮತ್ತು ಅವರ ಜತೆಯಲ್ಲಿದ್ದ ಲಗೇಜುಗಳನ್ನು ಪರಿಶೀಲನೆ ನಡೆಸಿದ್ದಾರೆ.

ರೈಲ್ವೆ ನಿಲ್ದಾಣದೊಂದಿಗೆ ಜನನಿಬಿಡ ಪ್ರದೇಶಗಳಾದ ಮೈಸೂರು ನಗರ ಮತ್ತು ಗ್ರಾಮಾಂತರ ಬಸ್‌ ನಿಲ್ದಾಣಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಡಿಸಿಪಿ ಎಂ. ಮುತ್ತುರಾಜು ತಿಳಿಸಿದ್ದಾರೆ.