ಮೈಸೂರು [ಅ.11]: ರಾಜ್ಯದಲ್ಲಿ ಶೀಘ್ರವೇ ಉಪ ಚುನಾವಣೆ ನಡೆಯಲಿದ್ದು,  ಈ ನಿಟ್ಟಿನಲ್ಲಿ ಉಪಚುನಾವಣಾ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆ ರಂಗೇರಿದೆ. 

ಹುಣಸೂರು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಅನರ್ಹ ಶಾಸಕ ವಿಶ್ವನಾಥ್ ಗೆ ಎದುರೇಟು ನೀಡಲು ಜೆಡಿಎಸ್ ನಾಯಕರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ತೆನೆ ತೆಕ್ಕೆಗೆ ತೆಗೆದುಕೊಳ್ಳಲು ತಂತ್ರ ನಡೆಸಿದ್ದು, ಸಭೆ ಹಾಗೂ ಹಳ್ಳಿ ಪ್ರಚಾರಕ್ಕೆ ಎಚ್.ಡಿ.ದೇವೇಗೌಡರು ಚಾಲನೆ ನೀಡಿದ್ದಾರೆ.  ಅನರ್ಹ ಶಾಸಕರಿಗೆ ಪಾಠ ಕಲಿಸಲು ಸಿದ್ಧವಾಗಿದ್ದು, ಇಂದು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ಥಳೀಯ ಕಾರ್ಯಕರ್ತರಿಗೆ ಟಿಕೆಟ್ ನೀಡಲು ವರಿಷ್ಠರು ನಿರ್ಧಾರ ಮಾಡಿದ್ದು, ಜೆಡಿಎಸ್ ಮತ್ತೆ ಗೆಲುವು ಸಾಧಿಸಲು ಕಾರ್ಯಕರ್ತ ಓಲೈಕೆಯಲ್ಲಿ ತೊಡಗಿದ್ದಾರೆ.