ಮೈಸೂರು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆ ಮೇಲೆ ಅತ್ಯಾಚಾರ ಎಸಗಿ, ಈ ಕೃತ್ಯದ ದೃಶ್ಯಗಳನ್ನು ಜಾಲತಾಣದಲ್ಲಿ ಹಂಚಿದ್ದ ಪುರುಷ ಶುಶ್ರೂಕನನ್ನು ಕೇರಳ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕಲ್ಲಿಕೋಟೆ: ಮೈಸೂರು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆ ಮೇಲೆ ಅತ್ಯಾಚಾರ ಎಸಗಿ, ಈ ಕೃತ್ಯದ ದೃಶ್ಯಗಳನ್ನು ಜಾಲತಾಣದಲ್ಲಿ ಹಂಚಿದ್ದ ಪುರುಷ ಶುಶ್ರೂಕನನ್ನು ಕೇರಳ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ನಿಶಾಮ್‌ ಬಾಬು (24) ತ್ರಿಶ್ಯೂರು (Thrissur)ಮೂಲದವನಾಗಿದ್ದು, ವೈದ್ಯೆ ಕೆಲಸ ಮಾಡುತ್ತಿದ್ದ ಮೈಸೂರು ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ. ವೈದ್ಯೆಗೆ ಕೊಯಮತ್ತೂರಿನಲ್ಲಿ ಉತ್ತಮ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಆತ 2022ರ ಡಿಸೆಂಬರ್‌ನಲ್ಲಿ ಆಕೆಯನ್ನು ಕಲ್ಲಿಕೋಟೆಗೆ (Kallikote)ಕರೆದೊಯ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ.

ಹತ್ರಾಸ್‌ ಗ್ಯಾಂಗ್‌ರೇಪ್‌, ಕೊಲೆ ಕೇಸ್‌: ಮೂವರನ್ನು ಖುಲಾಸೆಗೊಳಿಸಿದ ಕೋರ್ಟ್‌; ಒಬ್ಬರು ಮಾತ್ರ ದೋಷಿ

ಈ ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿಕೊಂಡಿದ್ದ ಆತ ಬಳಿಕ ಈ ವಿಡಿಯೋಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿ 2023ರ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಮೈಸೂರಿನ ಲಾಡ್ಜ್‌ಗೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ್ದ. ಈ ಹಿನ್ನೆಲೆಯಲ್ಲಿ ವೈದ್ಯೆ, ಆತನ ನಂಬರ್‌ ಬ್ಲ್ಯಾಕ್‌ ಮಾಡಿದ್ದಳು. ಇದರಿಂದ ಆಕ್ರೋಶಗೊಂಡ ಆತ ವೈದ್ಯೆಯ ನಗ್ನ ಫೋಟೋಗಳನ್ನು ಜಾಲತಾಣದಲ್ಲಿ ಹಾಕಿದ್ದ. ಈ ವಿಷಯ ತಿಳಿದ ಆಕೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನಿಶಾಮ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

43 ವರ್ಷದ ವ್ಯಕ್ತಿಯಿಂದ ಒಂದೇ ಮನೆಯ ಮೂವರು ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ!

ಈತನನ್ನು ಬಂಧಿಸಿದ ಪೊಲೀಸರು ಅವನ ವಿರುದ್ಧ ಐಪಿಸಿ ಸೆಕ್ಷನ್‌ 376 (ಅತ್ಯಾಚಾರ), 2000 ಇಸವಿಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 67ಎ (ಅಂತರ್ಜಾಲದಲ್ಲಿ ಲೈಂಗಿಕ ಬೆದರಿಕೆ ಹಾಕುವ ವಿರುದ್ಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.