ಮೈಸೂರು(ನ.08): ಟಿ. ನರಸೀಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಬ್ಬರು ಗಾಯಗೊಂಡಿದ್ದು, ಅವರನ್ನು ಕೆ. ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿ. ನರಸೀಪುರ ತಾಲೂಕಿನ ದುದ್ದಗಹಳ್ಳಿ ಸಮೀಪ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳು ಮೈಸೂರಿನ  ಕೆಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ: ಪಂಢರಪುರದ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ಐವರು ಭಕ್ತರ ಸಾವು.

ಮೃತರು ಬೆಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನ ನಿವಾಸಿಗಳಾದ ಇವರು ಗೃಹಪ್ರವೇಶ ಸಮಾರಂಭಕ್ಕೆಂದು ದುದ್ದಗಹಳ್ಳಿ ಗ್ರಾಮಕ್ಕೆ ಬಂದಿದ್ದರು. ವರುಣಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

50 ರೂ. ಕೊಡದ ಗೆಳೆಯನಿಗೆ ಚಾಕು ಇರಿದು ಕೊಲೆ