Asianet Suvarna News Asianet Suvarna News

ಬಾಲಿವುಡ್​ 'ಬಿಗ್ ಬಿ' ಮುಡಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ಭಾರತೀಯ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ಭಾರತ ಸರ್ಕಾರ ನೀಡುವ ಅತ್ಯುನ್ನತ ಪುರಸ್ಕಾರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಿಗ್ ಬಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್​ ಅವರು ಟ್ವೀಟ್​ ಮೂಲಕ ಮಾಹಿತಿ ಖಚಿತಪಡಿಸಿದ್ದಾರೆ.

Actor Amitabh Bachchan has been unanimously selected for the Dadasaheb Phalke award
Author
Bengaluru, First Published Sep 24, 2019, 8:22 PM IST

ಮುಂಬೈ/ನವದೆಹಲಿ, [ಸೆ.24] : ಸಿನಿರಂಗದಲ್ಲಿ ಅದ್ಭುತ ನಟನೆ ಮಾಡಿ ಸ್ಫೂರ್ತಿಯಾಗಿರುವ ಬಾಲಿವುಡ್ ದಿಗ್ಗಜ  ಬಿಗ್ ಬಿ ಅಮಿತಾಭ್​ ಬಚ್ಚನ್​ ಅವರು ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರು ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಆಗಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್​ ಅವರು ಟ್ವೀಟ್​ ಮೂಲಕ ಮಾಹಿತಿ ಖಚಿತಪಡಿಸಿದ್ದಾರೆ.

ಸಿನಿರಂಗದಲ್ಲಿ ಎರಡು ತಲೆಮಾರುಗಳನ್ನು ರಂಜಿಸಿ, ಸಾಕಷ್ಟು ಮಂದಿಗೆ ಸ್ಫೂರ್ತಿಯಾಗಿರುವ ಅಮಿತಾಭ್​ ಬಚ್ಚನ್​ ಅವರು ಸರ್ವಾನುಮತದಿಂದ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಡೀ ದೇಶ ಹಾಗೂ ಅಂತಾರಾಷ್ಟ್ರೀಯ ಸಮುದಾಯ ಈ ಆಯ್ಕೆಯಿಂದ ಸಂತಸಗೊಂಡಿದೆ. ಅಮಿತಾಭ್​ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು ಎಂದು  ಪ್ರಕಾಶ್​ ಜಾವಡೇಕರ್​ ಟ್ವೀಟ್​ ಮಾಡಿದ್ದಾರೆ.

ಮನೆ ಕೆಲಸದವನ ಮೃತದೇಹ ಹೊತ್ತು ಮಾನವೀಯತೆ ಮೆರೆದ ಅಮಿತಾಬ್ ಕುಟುಂಬ

ಸಿನಿಮಾ ಕ್ಷೇತ್ರದ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಮೇರುನಟ ಎಂಬ ಖ್ಯಾತಿಗೆ ಬಗ್ ಬಿ​ ಪಾತ್ರರಾಗಿದ್ದಾರೆ. 

ಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪುರಸ್ಕಾರ ನೀಡಲಾಗುತ್ತದೆ.  ಕನ್ನಡದ ವರನಟ ಡಾ. ರಾಜ್ ಕುಮಾರ್  ಸೇರಿ ಬಾಲಿವುಡ್ ದಿಗ್ಗಜರಾದ ವಿನೋದ್ ಖನ್ನಾ, ಮನೋಜ್ ಕುಮಾರ್, ಶಶಿ ಕಪೂರ್,ಮನ್ನಾ ಡೇ ಇನ್ನೂ ಹಲವರು ಈ ಪ್ರತಿಷ್ಠಿತ ಪುರಸ್ಕಾರಕ್ಕೆ ಭಾಜನರಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರ ನೀಡುವ ವಾರ್ಷಿಕ ಪ್ರಶಸ್ತಿಯಾಗಿದೆ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ 1969ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.

ಇನ್ನು 'ಬಿಗ್ ಬಿ'ಗೆ ದೊರೆತ ಪ್ರಶಸ್ತಿಗೆ ಚಿತ್ರರಂಗ, ರಾಜಕೀಯ ವ್ಯಕ್ತಿಗಳು ಸೇರಿದಂತೆ ಗಣ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

There is no mention of Indian cinema without this Legend! He has redefined cinema with every role & deserves every accolade for his innumerable contributions! Congratulations @SrBachchan! #DadaSahebPhalkeAward https://t.co/sBJ7aHlGCI

Follow Us:
Download App:
  • android
  • ios