ಬೆಂಗಳೂರಿನ ಅರೇಹಳ್ಳಿ ನಿವಾಸಿ ಸುನಿಲ್‌ ಪುರಾಣಿಕ್‌ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ. ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಆದೇಶ ನೀಡಿದ್ದಾರೆ. 

ಫಾಲ್ಕೆ ಪ್ರಶಸ್ತಿಯನ್ನು ನಮ್ರತೆಯಿಂದ ಸ್ವೀಕರಿಸಿದ 'ದಾದಾ'- ವಿಡಿಯೋ

ಬಹುಭಾಷಾ ಕಲಾವಿದರಾಗಿ ಗುರುತಿಸಿಕೊಂಡಿರುವ ಸುನಿಲ್ ಇದುವರೆಗೂ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ 50ಕ್ಕೂ ಹೆಚ್ಚು  ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇವರು ಕರ್ನಾಟಕ ರಾಜ್ಯೋತ್ಸವ ಹಾಗೂ ಕಂಪೇಗೌಡ ಪ್ರಶಸ್ತಿ ಪುರಸ್ಕೃತರು.  ಸುನಿಲ್ 'ಗುರುಕುಲ' ಎಂಬ ಕನ್ನಡ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಾರ್ಯ ನಿರ್ವಹಿಸುತ್ತಿದ್ದರು.