ಯುಗಾದಿ ಹಬ್ಬದ ಸಂದರ್ಭದಲ್ಲಿ ಬಾಲಿವಿಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹಲವು ಭಾಷೆಗಲ್ಲಿ ಶುಭ ಕೋರಿದ್ದಾರೆ.
ಮುಂಬೈ : ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ತಮ್ಮ ಹೆಸರನ್ನು ಹಾಕಿ ದೇಶದ ಜನತೆಗೆ ಯುಗಾದಿ ಹಬ್ಬದ ಶುಭ ಕೋರಿದ್ದಾರೆ.
ಯುಗಾದಿ ಹಬ್ಬದ ಶುಭಾಶಯ ಎಂದು ಬರೆದುಕೊಂಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖಾತೆಯಲ್ಲಿ ಹಲವು ಭಾಷೆಗಳಲ್ಲಿ ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ.
ಇದರಿಂದ ಬಿಗ್ ಬಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ಇತ್ತೀಚೆಗಷ್ಟೇ ಅಮಿತಾಭ್ ಬಚ್ಚನ್ ತಮಿಳು ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದೇ ಬೆನ್ನಲ್ಲೇ ಬಚ್ಚನ್ ಹಲವು ಭಾಷೆಗಳಲ್ಲಿ ಟ್ವೀಟ್ ಮಾಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
