Asianet Suvarna News Asianet Suvarna News

ಫಿಲ್ಮ್‌ ಸ್ಟಾರ್‌ಗಳ ಸ್ಮಾರಕಕ್ಕೆ ಸರ್ಕಾರದ ಹಣ, ಜಾಗ ಬಳಸಬಾರದು: ಚೇತನ್‌ ಅಹಿಂಸಾ

ಅಭಿಮಾನ್‌ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಿಸಲು ಜಾಗ ನೀಡುವಂತೆ ಅನಿರ್ದಿಷ್ಟಾವಧಿ ಧರಣಿ ಆರಂಭವಾಗಿರುವ ನಡುವೆ, ಚೇತನ್‌ ಅಹಿಂಸಾ ಈ ವಿಚಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Chetan Kumar Ahimsa says government funds should not be used for any film star memorials san
Author
First Published Dec 19, 2023, 12:55 PM IST

ಬೆಂಗಳೂರು (ಡಿ.19): ಸಾಹಸಸಿಂಹ ಎನ್ನುವ ಹೆಸರಿನಿಂದಲೇ  ಪ್ರಖ್ಯಾತರಾಗಿದ್ದ ನಟ ವಿಷ್ಣುವರ್ಧನ್‌ ಕನ್ನಡದ ಅಭಿಮಾನಿಗಳನ್ನು ಅಗಲಿ ಮುಂದಿನ ಡಿಸೆಂಬರ್‌ 30ಕ್ಕೆ 14 ವರ್ಷ ತುಂಬಲಿದೆ. ಇದರ ನಡುಎ ಬೆಂಗಳೂರಿನಲ್ಲಿ ಡಾ.ವಿಷ್ಣುವರ್ಧನ್‌ ಅವರ ಪುಣ್ಯಭೂಮಿ ನಿರ್ಮಾಣವಾಗಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟ ಆರಂಭವಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿಷ್ಣವರ್ಧನ್‌ ಅವರ ಸ್ಮಾರಕ ಲೋಕಾರ್ಪಣೆಗೊಂಡಿದೆ. ಆದರೆ, ಬೆಂಗಳೂರಿನಲ್ಲಿ ಅವರ ಅಂತ್ಯಸಂಸ್ಕಾರವಾದ ಸ್ಥಳವಾಗಿರುವ ಅಭಿಮಾನ್‌ ಸ್ಟುಡಿಯೋದಲ್ಲಿ 10 ಗುಂಟೆ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಒತ್ತಾಸೆಯಾಗಿದೆ. ಈ ನಿಟ್ಟಿನಲ್ಲಿ ಡಾ.ವಿಷ್ಣುವರ್ಧನ್‌ ಪುಣ್ಯಭೂಮಿ ಟ್ರಸ್ಟ್‌, ಸೋಮವಾರದಿಂದ ಬೆಂಗಳೂರಿನ ಫ್ರೀಡಮ್‌ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನೂ ಆರಂಭ ಮಾಡಿದೆ. ಅಭಿಯನಯ ಚಕ್ರವರ್ತಿ ಕಿಚ್ಚ ಸುದೀಪ್‌, ನೆನಪಿರಲಿ ಪ್ರೇಮ್‌, ನೀನಾಸಮ್‌ ಸತೀಶ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರು ಕೂಡ ಇದಕ್ಕೆ ಸಾಥ್‌ ನೀಡಿದ್ದಾರೆ. ಈ ನಡುವೆ ಎಲ್ಲಾ ವಿಚಾರಗಳನ್ನು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸುದ್ದಿಯಾಗುವ ಚೇತನ್‌ ಕುಮಾರ್‌ ಅಹಿಂಸಾ, ವಿಷ್ಣುವರ್ಧನ್‌ ಅವರ ಸ್ಮಾರಕ ವಿಚಾರದಲ್ಲಿಯೂ ಟ್ವೀಟ್‌ ಮಾಡಿ ಅಭಿಮಾನಿಗಳನ್ನು ಕೆಣಕಿದ್ದಾರೆ.


'ಬೆಂಗಳೂರಿನಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳದಲ್ಲಿ ಅಭಿಮಾನಿಗಳ ಪ್ರಾಯೋಜಿತ ಸ್ಮಾರಕದ ಸಮಸ್ಯೆಯನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಉತ್ತಮವಾಗಿದೆ. 5 ಎಕರೆ, 11 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು ಸ್ಮಾರಕವನ್ನು ಈಗಾಗಲೇ ನಿರ್ಮಾಣ ಮಾಡಲಾಗಿದೆ. ಈಗ ಮತ್ತೊಮ್ಮೆ ತೆರಿಗೆದಾರರ ನಿಧಿ/ಸರ್ಕಾರಿ ಭೂಮಿಯನ್ನು ನೀಡಬಾರದು, ಇದು ಪ್ರಶ್ನಾರ್ಹವಾಗಿದೆ, ಏಕೆಂದರೆ ಯಾವುದೇ ಚಲನಚಿತ್ರ ತಾರೆಯರ ಸ್ಮಾರಕಗಳಿಗೆ ಸರ್ಕಾರದ ಹಣವನ್ನು ಬಳಸಬಾರದು' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅಹಿಂಸಾ ವಿರುದ್ಧ ದೂರು

ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಭೂಮಿ ಒದಗಿಸುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್‌ ಹೇಳಿದೆ. ಆದರೆ, ರಾಜ್ಯ ಸರ್ಕಾರ ವಿಷ್ಣುವರ್ಧನ್‌ ಅವರ ಸಮಾಧಿ ವಿಚಾರದಲ್ಲಿ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಂಡಿಲ್ಲ. ಅವರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ಡಿ.30 ರಂದು ವಿಷ್ಣುವರ್ಧನ್‌ ಅವರ ಪುಣ್ಯಸ್ಮರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಭೂಮಿ ವಿವಾದವನ್ನು ಮುಕ್ತಾಯ ಮಾಡಬೇಕು ಎಂದು ವಿಷ್ಣುವರ್ಧನ್‌ ಪುಣ್ಯಭೂಮಿ ಟ್ರಸ್ಟ್‌ನ ಅಧ್ಯಕ್ಷ ರಾಜುಗೌಡ ಹೇಳಿದ್ದರು. 2023ರ ಆಗಸ್ಟ್‌ 21 ರಂದೇ ಈ ಪ್ರಕರಣವನ್ನು ಹೈಕೋರ್ಟ್‌ ಇತ್ಯರ್ಥ ಮಾಡಿದೆ. ಸರ್ಕಾರ ಕೂಡಲೇ ಅಭಿಮಾನ್‌ ಸ್ಟುಡಿಯೋದ ಮಾಲೀಕರ ಜೊತೆ ಮಾತನಾಡಿ 10 ಗುಂಟೆ ಜಾಗದ ಪ್ರಕರಣವನ್ನು ಇತ್ಯರ್ಥ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮದರಸಾ, ಮಠಗಳಿಗೆ ಹಣ ಖರ್ಚು ಮಾಡೋದನ್ನ ನಿಲ್ಲಿಸಿದರೆ, ಜಾತ್ಯಾತೀತತೆ: ಚೇತನ್‌ ಅಹಿಂಸಾ

ವಿಷ್ಣುವರ್ಧನ್‌ ಸ್ಮಾರಕ ಹೋರಾಟವನ್ನು ಬೆಂಬಲಿಸಿ ನಟ ಕಿಚ್ಚ ಸುದೀಪ್‌ ಟ್ವೀಟ್‌ ಮಾಡಿದ್ದರು,  'ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ' ಎಂದು ಟ್ವೀಟ್‌ ಮಾಡಿದ್ದಾರೆ.
 

Follow Us:
Download App:
  • android
  • ios