ಬೆಂಗಳೂರು(ಮೇ.22): ಪಾಶ್ರ್ವವಾಯುವಿನಿಂದ ಬಳಲುತ್ತಿದ್ದ ಖ್ಯಾತ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಗಾಯಕಿ ಶ್ಯಾಮಲಾ ಜಿ.ಭಾವೆ ಚಿಕಿತ್ಸೆ ಫಲಕಾರಿಯಾಗದೆ ಮೇ. 22 ಬೆಳಗ್ಗೆ, 06.30ಕ್ಕೆ  ಕೊನೆಯುಸಿರೆಳೆದಿದ್ದಾರೆ.

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಗಾಯಕಿ ಶ್ಯಾಮಲಾ ಜಿ.ಭಾವೆ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಡೆಯಲಿವೆ. ಲಾಕ್‌ಡೌನ್‌ ಹಿನ್ನೆಲೆ ಜನರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡುವುದು ಬೇಡ. ಈ ನಿಟ್ಟಿನಲಲ್ಲಿ ಸಹಕರಿಸಬೇಕು ಎಂದು ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.

ಸನಾರೋಗ್ಯದಿಂದ ಬಳಲುತ್ತಿದ್ದ ಗಾಯಕಿ

ಗಾಯಕಿ ಶ್ಯಾಮಲಾ ಜಿ.ಭಾವೆ ನಗರದ ಶೇಷಾದ್ರಿಪುರಂನಲ್ಲಿರುವ ನಿವಾಸದಲ್ಲಿ ಮೇ 15(ಶುಕ್ರವಾರ)ರಂದು ಬೆಳಗ್ಗೆ ಪಾಶ್ರ್ವವಾಯುವಿಗೆ ಒಳಗಾಗಿದ್ದರು. ಕೂಡಲೇ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರಿಗೆ ಸ್ವಗೃಹದಲ್ಲೇ ವೆಂಟಿಲೇಟರ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.