ನವದೆಹಲಿ[ಜೂ.19]: ಡ್ಯಾನ್ಸ್ ಸೇರಿ ಟೀವಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ಮಕ್ಕಳಿಂದ ಅಸಭ್ಯ ನೃತ್ಯ ಮಾಡಿಸುವ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇಷ್ಟೇ ಅಲ್ಲದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಇಂಥ ಎಲ್ಲಾ ಕಾರ್ಯಕ್ರಮಗಳನ್ನು ಹಿಂಪಡೆಯಲು ಟೀವಿ ಚಾನೆಲ್‌ಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಹೇಳಿಕೆ ನೀಡಿದ ವಾರ್ತಾ ಇಲಾಖೆ, ವಿವಿಧ ಟೀವಿ ಚಾನೆಲ್ ಗಳು ಪ್ರಸಾರ ಮಾಡುವ ರಿಯಾಲಿಟಿ ಶೋಗಳಲ್ಲಿ ಮಕ್ಕಳಿಂದಲೂ ಅಸಭ್ಯ ನೃತ್ಯ ಮಾಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂಥ ಕಾರ್ಯಕ್ರಮ ಗಳನ್ನು ಪ್ರಸಾರ ಮಾಡದಂತೆ ಸೂಚಿಸಿದೆ.