ಬೆಂಗಳೂರು (ಫೆ. 19): ಕನ್ನಡದ ಖ್ಯಾತ ಫೋಷಕ ನಟ ಕಿಲ್ಲರ್ ವೆಂಕಟೇಶ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಾವು- ಬದುಕಿನ ನಡುವೆ ಹೋರಾಡುತ್ತಿರುವ ವೆಂಕಟೇಶ್‌ರನ್ನು ಜಗ್ಗೇಶ್ ಭೇಟಿ ಮಾಡಿ ಅವರ ಪರಿಸ್ಥಿತಿ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.  ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿದ್ದಾರೆ ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ. 

ಕಲಾವಿದರು ಕಷ್ಟದಲ್ಲಿರಬಾರದು, ಅಂಧ ಗಾಯಕಿಯರಿಗೆ ಜಗ್ಗೇಶ್ ಸೂರಿನ ವಾಗ್ದಾನ

 

ಜಗ್ಗೇಶ್ ಟ್ವೀಟ್‌ಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು ಡಿಸಿಎಂ ಅಶ್ವತ್ ನಾರಾಯಣ್, ಆರೋಗ್ಯ ಸಚಿವ ಶ್ರೀರಾಮುಲು ವೆಂಕಟೇಶ್ ಅವರ ಆರೋಗ್ಯ ವಿಚಾರಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 

ಕಿಲ್ಲರ್ ವೆಂಕಟೇಶ್ ಒಂದು ಕಾಲದ ಬಹು ಬೇಡಿಕೆ ನಟ.  ಪೋಷಕ ಪಾತ್ರಕ್ಕೂ ಸೈ, ಖಳನಟನ ಪಾತ್ರಕ್ಕೂ ಸೈ ಎನಿಸಿಕೊಂಡಿದ್ದ ನಟ. ಸುಮಾರು 250 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.  ಜಗ್ಗೇಶ್ ಜೊತೆ 'ರಣಧೀರ' ಚಿತ್ರದಲ್ಲಿಯೂ ನಟಿಸಿದ್ದಾರೆ.