ಮಂಗಳೂರು[ಮಾ.04]  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್‌ ಕುಮಾರಸ್ವಾಮಿ ಭೇಟಿ ನೀಡಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಭೇಟಿ ಮಾಡಿ ಮಂಜುನಾಥ ಸ್ವಾಮಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ನಿಖಿಲ್, ನನಗೆ ಮಂಡ್ಯದಿಂದ ಸ್ಪರ್ಧೆ ಮಾಡಲು ಹಿರಿಯರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸುಮಲತಾ ಅವರ ತೀರ್ಮಾನ ತೆಗೆದುಕೊಳ್ಳಲು ಸ್ವತಂತ್ರರು ಎಂದಿದ್ದಾರೆ.

ದರ್ಶನ್ ’ಕುರುಕ್ಷೇತ್ರ’ ರಿಲೀಸ್‌ಗೆ ಅಡ್ಡಿಯಾದ್ರಾ ನಿಖಿಲ್ ಕುಮಾರಸ್ವಾಮಿ?

ಇನ್ನೊಂದು ಕಡೆ ನಟಿ ರಚಿತಾ ರಾಮ್ ಸಹ ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಇರುವ ಪೋಟೋವನ್ನು ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಿಖಿಲ್-ರಚಿತಾ ಜತೆಯಾಗಿ ಕಾಣಿಸಿಕೊಂಡಿದ್ದರು.