ಕೊರೋನಾ ಪಾಸಿಟಿವ್ ದೃಢವಾಗುವ ಸುದ್ದಿಯನ್ನು ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾ ಮೂಲಕ ತಿಳಿಸುತ್ತಿದ್ದಾರೆ. ಇದೀಗ ಖ್ಯಾತ ಹಿನ್ನೆಲೆ ಗಾಯಕ ಎಸ್‌.ಪಿ. ಬಾಲಸುಬ್ರಮಣ್ಯಂ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಖ್ಯಾತ ಗಾಯಕ ಎಸ್.ಪಿ, ಬಾಲಸುಬ್ರಹ್ಮಣ್ಯಂ ಗೆ ಕೋರೊನಾ ಪಾಸಿಟಿವ್ ಕಂಡು ಬಂದಿದ್ದು, ವಿಡಿಯೋ ಮೂಲಕ ತಮಗೆ ಕೋವಿಡ್ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.

Posted by S. P. Balasubrahmanyam on Tuesday, August 4, 2020

ಎರಡು ಮೂರು ದಿನಗಳಿಂದ ಸ್ವಲ್ಪ ಆರೋಗ್ಯದಲ್ಲಿ ಸಮಸ್ಯೆ ಇತ್ತು. ಜ್ವರ ಹಾಗೂ ಶೀತ ಇತ್ತು. ಹಾಗಾಗಿ ಆಸ್ಪತ್ರೆಗೆ ಬಂದು ಚೆಕ್ ಮಾಡಿಸಿದೆ. ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ಇರುವುದು ಗೊತ್ತಾಗಿದೆ ಹಾಗಾಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆನೆ ಎಂದು ಅವರು ತಿಳಿಸಿದ್ದಾರೆ.