ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ| ಗಾಯಕ ಹನುಮಂತ ನೇತ್ರದಾನ| 

ಸವಣೂರು[ಜು.22]: ರಿಯಾಲಿಟಿ ಶೋನಿಂದ ಪ್ರಖ್ಯಾತರಾಗಿರುವ ಗಾಯಕ ಹನುಮಂತ ಲಮಾಣಿ ಅವರು ನೇತ್ರದಾನ ಮಾಡುವ ಬಗ್ಗೆ ಘೋಷಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯ​ಕ್ರ​ಮ​ದಲ್ಲಿ ಅವರು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿದರು.

ಈ ವೇಳೆ ಮಾತ​ನಾ​ಡಿದ ಅವರು, ನಾನು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನನ್ನ ಮರಣಾನಂತರ ಕಣ್ಣುಗಳನ್ನು ದಾನವಾಗಿ ನೀಡಲು ಒಪ್ಪಿಗೆ ಸೂಚಿಸಿದ್ದೇನೆ. ಇಂತ​ಹ ಕಾರ್ಯದಲ್ಲಿ ಸರ್ವರೂ ಪಾಲ್ಗೊಂಡಲ್ಲಿ ಮಾತ್ರ ಅಂಧರ ಬಾಳಿಗೆ ಬೆಳಕು ನೀಡಿದಂತಾ​ಗು​ತ್ತದೆ. ಹಾಗಾ​ಗಿ ಅಂಧತ್ವ ನಿವಾರಣೆಗೆ ಮುಂದಾಗಬೇಕು ಎಂದರು.