ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎರಡು ದಿನಗಳ ಭೇಟಿಗೆ ಭಾನುವಾರ ಕರಾವಳಿಗೆ ಆಗಮಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಮಂಗಳೂರು (ಫೆ.12): ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎರಡು ದಿನಗಳ ಭೇಟಿಗೆ ಭಾನುವಾರ ಕರಾವಳಿಗೆ ಆಗಮಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಜನಿಕಾಂತ್ ಅವರು ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ಒಂದರಲ್ಲಿ ನಟಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ ಸಿನಿಮಾದ ಚಿತ್ರೀಕರಣ ಕರಾವಳಿಯಲ್ಲಿ ನಡೆಯುತ್ತಿದ್ದು, ಶಿವರಾಜ್ ಕುಮಾರ್ ಕೂಡ ಜತೆಯಾಗಿಯೇ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ಖಾಸಗಿ ಕಾರ್ಯಕ್ರಮಗಳಲ್ಲೂ ರಜನಿಕಾಂತ್ ಭಾಗವಹಿಸಲಿದ್ದಾರೆ, ಎನ್ನಲಾಗಿದ್ದು ಅವರು ಧಾರ್ಮಿಕ ಕ್ಷೇತ್ರಗಳ ಭೇಟಿಗೂ ತೆರಳುವ ಸಾಧ್ಯತೆಯನ್ನು ಮೂಲಗಳು ತಿಳಿಸಿವೆ.