ತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಸೇರಿದಂತೆ 25 ಸೆಲೆಬ್ರಿಟಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉದ್ಯಮಿ ಫಣೀಂದ್ರ ಶರ್ಮಾ ದೂರಿನ ಆಧಾರದ ಮೇಲೆ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೈದರಾಬಾದ್‌ (ಮಾ.20): ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಅನ್ನೋ ಮಾತಿನಂತೆ ತಮ್ಮ ಪೋಸ್ಟ್‌ಗಳ ಸುದ್ದಿಯಲ್ಲಿರುವ ನಟ ಪ್ರಕಾಶ್‌ ರಾಜ್‌ ಸೇರಿದಂತೆ 25 ಮಂದಿ ನಟ-ನಟಿಯರ ವಿರುದ್ಧ ತೆಲಂಗಾಣ ಸರ್ಕಾರ ಕ್ರಮ ಕೈಗೊಂಡಿದೆ. ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಸೇರಿದಂತೆ 25 ಸೆಲೆಬ್ರಿಟಿಗಳ ವಿರುದ್ಧ ತೆಲಂಗಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ದೂರು ದಾಖಲಿಸಿದ ನಂತರ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಮಾರ್ಚ್ 18 ರಂದು ತೆಲಂಗಾಣ ಟುಡೇ ವರದಿ ಮಾಡಿರುವ ಪ್ರಕಾರ, ಆರೋಪಿತ ಯೂಟ್ಯೂಬರ್‌ಗಳು ಮತ್ತು ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಪೊಲೀಸರು ಅವರ ಸಹಕಾರವನ್ನು ಕೋರಿದ್ದಲ್ಲದೆ, ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ. ವಿಷ್ಣು ಪ್ರಿಯಾ, ಹರ್ಷ ಸಾಯಿ ಮತ್ತು ಇಮ್ರಾನ್ ಸೇರಿದಂತೆ ಇತರ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಡ್ರ್ಯಾಗನ್ ರಾಷ್ಟ್ರದ ಮೇಲೆ ಮತ್ತೆ ಬ್ರಹ್ಮಾಸ್ತ್ರ: ಚೀನಾ ಲಿಂಕ್ ಹೊಂದಿರುವ 138 ಬೆಟ್ಟಿಂಗ್, 94 ಲೋನ್‌ ಆ್ಯಪ್‌ ನಿಷೇಧ..!

ಬೆಟ್ಟಿಂಗ್ ದಂಧೆಯ ವಿವರಗಳನ್ನು ಖಚಿತಪಡಿಸಿಕೊಳ್ಳಲು, ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಬಗ್ಗೆ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ ಎಂದು ಡಿಸಿಪಿ (ಪಶ್ಚಿಮ) ಎಸ್ ಎಂ ವಿಜಯ್ ಕುಮಾರ್ ಹೇಳಿದ್ದಾರೆ. "ಪ್ರಮೋಟರ್‌ಗಳ ಮೂಲಕ ಬೆಟ್ಟಿಂಗ್ ದಂಧೆಯ ಸಂಘಟಕರ ಬಗ್ಗೆ ನಮಗೆ ತಿಳಿಯುತ್ತದೆ. ವಿವರವಾದ ತನಿಖೆಗಾಗಿ ಇತರ ತನಿಖಾ ಸಂಸ್ಥೆಗಳ ಸಹಾಯವನ್ನು ಪಡೆಯಲಾಗುವುದು" ಎಂದು ವಿಜಯ್ ಕುಮಾರ್ ಹೇಳಿದ್ದಾರೆ ಎಂದು ತೆಲಂಗಾಣ ಟುಡೇ ವರದಿ ಮಾಡಿದೆ. ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್, ಅನನ್ಯ ನಾಗೆಲ್ಲ, ಸಿರಿ ಹನುಮಂತು, ಶ್ರೀಮುಖಿ, ವರ್ಷಿನಿ ಶೇಣಿ, ವರ್ಷಿನಿ ಸೌಂದರ್‌ರಾಜನ್‌ ಮೇಲೂ ಕೇಸ್‌ ದಾಖಲಾಗಿದೆ.

ಕಾಮೆಂಟ್‌ ಸೆಕ್ಷನ್‌ ಆಫ್;‌ ವಿವಾದಾತ್ಮಕ ವಿಡಿಯೋ ಹಂಚಿಕೊಂಡ Seetha Raama Serial ನಟಿ ವೈಷ್ಣವಿ ಗೌಡ!

ಮಿಯಾಪುರದ ನಿವಾಸಿ ಮತ್ತು ಉದ್ಯಮಿ ಪಿ.ಎಂ. ಫಣೀಂದ್ರ ಶರ್ಮಾ ಅವರು ನೀಡಿದ ದೂರಿನ ಆಧಾರದ ಮೇಲೆ, 318(4), 112 ಮತ್ತು 49 ಬಿಎನ್‌ಎಸ್‌ನೊಂದಿಗೆ ಟಿಎಸ್ ಗೇಮಿಂಗ್ ಕಾಯ್ದೆಯ ಸೆಕ್ಷನ್ 3, 3(ಎ), 4 ಮತ್ತು ಐಟಿ ಕಾಯ್ದೆಯ ಸೆಕ್ಷನ್ (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಮ್ಮ ಕಾಲೋನಿಯ ಸಮುದಾಯದ ಯುವಕರೊಂದಿಗೆ ಸಂವಹನ ನಡೆಸುವಾಗ, ಅವರಲ್ಲಿ ಹೆಚ್ಚಿನವರು ಬೆಟ್ಟಿಂಗ್, ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್‌ಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ಶರ್ಮಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಇವುಗಳನ್ನು ಸೆಲೆಬ್ರಿಟಿಗಳು ಮತ್ತು ಪ್ರಭಾವಿಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡುತ್ತಿದ್ದರು ಎಂದಿದ್ದಾರೆ.

Scroll to load tweet…