ದಕ್ಷಿಣ ಭಾರತದ ಖ್ಯಾತ ನಟಿ ಮೀನಾ ಪತಿ ವಿದ್ಯಾಸಾಗರ್‌ ಇನ್ನಿಲ್ಲ

*  ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ
*  ಶ್ವಾಸಕೋಶದ ಸಮಸ್ಯೆಯಿಂದ ನಿಧನ
*  ವಿದ್ಯಾಸಾಗರ್‌ ಅಗಲಿಕೆಗೆ ಕಂಬನಿ ಮಿಡಿದ ದಕ್ಷಿಣ ಭಾರತದ ಚಿತ್ರರಂಗ 

Veteran Actress Meena Husband Vidyasagar Passes Away Due to Covid19 grg

ಚೆನ್ನೈ(ಜೂ.29):ದಕ್ಷಿಣ ಭಾರತದ ಖ್ಯಾತ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್‌ ನಿನ್ನೆ(ಮಂಗಳವಾರ) ಮೃತಪಟ್ಟಿದ್ದಾರೆ ಅಂತ ಚೆನ್ನೈನ ಖಾಸಗಿ ಆಸ್ಪತ್ರೆ ತಿಳಿಸಿದೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾಸಾಗರ್‌ ಅವರನ್ನ ಕಳೆದ ಕೆಲವು ದಿನಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ವಿದ್ಯಾಸಾಗರ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ, ವಿದ್ಯಾಸಾಗರ್‌ ಅವರು ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾಸಾಗರ್‌ ಇಹಲೋಕ ತ್ಯಜಿಸಿದ್ದಾರೆ. ವಿದ್ಯಾಸಾಗರ್‌ ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು ಅಂತ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆದಾಗ್ಯೂ ವಿದ್ಯಾಸಾಗರ್‌ ಅವರನ್ನ ಬದುಕುಳಿಸಲು ಸಾಕಷ್ಟು ಪ್ರಯತ್ನ ಪಟ್ಟರಾದರೂ ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾಸಾಗರ್‌ ಕೊನೆಯುಸಿರೆಳೆದಿದ್ದಾರೆ. ಇದೇ ವರ್ಷದ ಜನವರಿಲ್ಲಿ ಮೀನಾ ಅವರ ಇಡೀ ಕುಟುಂಬಕ್ಕೆ ಕೋವಿಡ್‌ ಸೋಂಕು ತಗುಲಿತ್ತು. ಆದರೆ, ಎಲ್ಲರೂ ಕೊರೋನಾ ಗುಣಮುಖರಾಗಿದ್ದರು.  

ಬಾಲಿವುಡ್‌ ನಟ ಹೃತಿಕ್ ರೋಷನ್‌ ಅಜ್ಜಿ ನಿಧನ

ವಿದ್ಯಾಸಾಗರ್‌ ಅಗಲಿಕೆಯಿಂದ ದಕ್ಷಿಣ ಭಾರತದ ಚಿತ್ರರಂಗದ ಅನೇಕ ನಟ, ನಟಿಯರು ಸೇರಿದಂತೆ ಚಿತ್ರರಂಗದ ಅನೇಕರು ಮೀನಾ ಮತ್ತು ಅವರ ಮಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ.  ನಟಿ ಮೀನಾ ಅವರು ಬೆಂಗಳೂರು ಮೂಲದ ವಿದ್ಯಾಸಾಗರ್‌ ಅವರನ್ನ 2009 ರಲ್ಲಿ ವರಿಸಿದ್ದರು. ನಟಿ ಮೀನಾ ಅವರು ತೆಲುಗು, ತಮಿಳು, ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿದ್ದರು. 
 

Latest Videos
Follow Us:
Download App:
  • android
  • ios