ಪುನೀತ್, ಯಶ್ ಹೆಗಲಿಗೆ ಸರ್ಕಾರದಿಂದ ಹೊಸ ಹೊಣೆ
ರಾಜ್ಯಾದ್ಯಂತ ಮುಜರಾಯಿ ದೇವಸ್ಥಾನಗಳಲ್ಲಿ ಆಯೋಜಿಸುವ ಸಾಮೂಹಿಕ ಮದುವೆಗೆ ರಾಯಭಾರಿಗಳಾಗಿ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ, ಪುನೀತ್ ರಾಜ್‌ಕುಮಾರ್ ಹಾಗೂ ಯಶ್ ದಂಪತಿ ಆಯ್ಕೆಯಾಗಿದ್ದಾರೆ.
ಬೆಂಗಳೂರು (ಡಿ. 25): ಪುಣ್ಯಕ್ಷೇತ್ರದಲ್ಲಿ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಯೋಜನೆಗೆ ಇಸ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್ ರಾಜ್‌ಕುಮಾರ್, ಯಶ್ ದಂಪತಿ ರಾಯಭಾರಿಗಳಾಗಿರುತ್ತಾರೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
‘ಮಗನ ಮದುವೆ ಬೆಂಗಳೂರು ಪ್ಯಾಲೇಸ್‌ನಲ್ಲಿ ಮಾಡ್ಬೇಕು, ಕನ್ಯಾ ಇದ್ರೆ ನೋಡ್ರಪ್ಪಾ’
ಸರ್ಕಾರದಿಂದ ಸರಳ, ಸಾಮೂಹಿಕ ವಿವಾಹ ಯೋಜನೆ ಕುರಿತ ಸಿದ್ಧತೆ ಬಗ್ಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇದಾಗಿದ್ದು, ಈ ಮೂವರು ರಾಯಭಾರಿಗಳ ಜತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ಸಚಿವರು, ಮಠಾಧೀಶರು, ಗಣ್ಯರು ಖುದ್ದು ಈ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪರಭಾಷೆ ಸ್ಟಾರ್‌ಗಳೇ ಎದ್ದು ನಿಂತ್ರು ನಮ್ ಯಶ್ ನೋಡಿ!
ರಾಜ್ಯದಲ್ಲಿ ಹೆಚ್ಚಿನ ಆದಾಯವಿರುವ 16 ಎ ದರ್ಜೆಯ ದೇವಾಲಯಗಳಲ್ಲಿ ಕಲ್ಯಾಣ ಮಂಟಪ, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳಿರುವ ದೇವಾಲಯಗಳಲ್ಲಿ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿದೆ ಎಂದರು.
ಡಿಸೆಂಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ