ಹುತಾತ್ಮ ಯೋಧರ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಚೀನಾ ಗಡಿಭಾಗದಲ್ಲಿರುವ 5 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಗ್ಯಾಂಗ್’ಟಕ್’ನಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ರಾಜನಾಥ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

ನವದೆಹಲಿ (ಮೇ.20): ಹುತಾತ್ಮ ಯೋಧರ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಚೀನಾ ಗಡಿಭಾಗದಲ್ಲಿರುವ 5 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಗ್ಯಾಂಗ್’ಟಕ್’ನಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ರಾಜನಾಥ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

ಹುತಾತ್ಮ ಯೋಧರ ಕುಟುಂಬಗಳಿಗೆ (ಸಿಎಪಿಎಫ್) 1 ಕೋಟಿ ಪರಿಹಾರ ನೀಡುವ ಭರವಸೆ ನೀಡುತ್ತಿದ್ದೇನೆ. 34 ಸಾವಿರ ಪ್ಯಾರಾಮಿಲಿಟರಿ ಕಾನ್ಸ್’ಟೇಬಲ್’ಗಳನ್ನು ಹೆಡ್ ಕಾನ್ಸ್ ಟೇಬಲ್ ಗಳಾಗಿ ಉನ್ನತ ದರ್ಜೆಗೇರಿಸಲಾಗುವುದು. ನಮ್ಮ ಯೋಧರ ಸಮಸ್ಯೆಗಳನ್ನು ತಿಳಿದುಕೊಳ್ಳುವುದು ನಮ್ಮ ಕರ್ತವ್ಯ. ಹಾಗಾಗಿ ಅವರ ಸಮಸ್ಯೆಗಳನ್ನು ಹೇಳಿಕೊಳ್ಳಲು ಗೃಹ ಇಲಾಖೆಯು ಮೊಬೈಲ್ ಅಪ್ಲಿಕೇಶನ್’ನನ್ನು ಪ್ರಾರಂಭಿಸಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ನಿನ್ನೆ ಭಾರತ-ಚೀನಾ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತಾ ಸ್ಥಿತಿಯನ್ನು ಅವಲೋಕಿಸಿದರು. ಅರೆಸೈನಿಕದಳ ಸುಧಾರಣೆಗಾಗಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ಮಾಡಲಾಗುವುದು ಎಂದು ರಾಜನಾಥ್ ಸಿಂಗ್ ಹೇಳಿದರು.