ಕೆಲ ತಿಂಗಳುಗಳ ಹಿಂದೆ ರಾಜ್ಯದಲ್ಲಿ ಸಾಲ ಬಾಧೆ ತಾಳಲಾರದೆ  ರೈತರ ಸರಣಿ ಆತ್ಮಹತ್ಯೆಗಳು ನಡೆದಿದ್ದವು. ಈಗಲೂ ಸಹ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ  2018ರ ಏಪ್ರಿಲ್ ನಿಂದ ಆಗಸ್ಟ್ ತಿಂಗಳ ವರೆಗಿನ ಅವಧಿಯಲ್ಲಿ ಅತಿ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. 

ಬೆಂಗಳೂರು, [ಸೆ.28]: ಕೆಲ ತಿಂಗಳುಗಳ ಹಿಂದೆ ರಾಜ್ಯದಲ್ಲಿ ಸಾಲ ಬಾಧೆ ತಾಳಲಾರದೆ ರೈತರ ಸರಣಿ ಆತ್ಮಹತ್ಯೆಗಳು ನಡೆದಿದ್ದವು. ಈಗಲೂ ಸಹ ರೈತರ ಆತ್ಮಹತ್ಯೆ ಮುಂದುವರೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 2018ರ ಏಪ್ರಿಲ್ ನಿಂದ ಆಗಸ್ಟ್ ತಿಂಗಳ ವರೆಗಿನ ಅವಧಿಯಲ್ಲಿ ಅತಿ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ತಿಂಗಳ ವರೆಗಿನ ಈ 5 ತಿಂಗಳಲ್ಲಿ ಬರೋಬ್ಬರಿ 283 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 

ಏಪ್ರಿಲ್ ನಿಂದ ಆಗಸ್ಟ್ ವರೆಗಿನ ಅವಧಿಯಲ್ಲಿ ಪ್ರತಿ 12 ತಾಸಿಗೆ ಅಂದರೆ ಅರ್ಧ ದಿನಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದನ್ನು ನೋಡುವುದಾದರೆ, ಉತ್ತರ ಕರ್ನಾಟದ ಜಿಲ್ಲೆಗಳಲ್ಲಿಯೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ-34, ವಿಜಯಪುರ-21, ಕಲಬುರಗಿ-19, ಹಾವೇರಿ-18, ಧಾರವಾಡ ಮತ್ತು ಚಿಕ್ಕಮಗಳೂರು ಜಿಲ್ಲೆ ಕ್ರಮವಾಗಿ 17 ಜನ ರೈತರು ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.