ಹಜಾರಿಬಾಗ್ : ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟ ಘಟನೆ ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ಸಂಭವಿಸಿದೆ. 

ದನುವಾ -ಬನುವಾ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಅಪಘಾತವಾಗಿದ್ದು 23ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಹಜಾರಿಬಾಗ್ ಪೊಲೀಸರು ತಿಳಿಸಿದ್ದಾರೆ. 

ಬಸ್ ಬಿಹಾರದ ಪಾಟ್ನಾ ಜಿಲ್ಲೆಯ ಮಸೌರಿ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅವಘಢವಾಗಿದೆ.