ಟೆಹ್ರಾನ್  :  ಭೀಕರ ಬಸ್ ಅಪಘಾತವೊಂದರಲ್ಲಿ 10 ಮಂದಿ ಮೃತಪಟ್ಟಿರುವ ಘಟನೆ  ಇರಾನ್ ಟೆಹ್ರಾನ್ ನಲ್ಲಿ ನಡೆದಿದೆ.

 30 ಮಂದಿ ಟೆಹ್ರಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪರ್ವತದ ಹಾದಿಯಲ್ಲಿ  ತೆರಳುತ್ತಿದ್ದ ವೇಳೆ ಕಂದಕಕ್ಕೆ ಉರುಳಿದೆ. ಈ ವೇಳೆ 10 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಎಲ್ಲರೂ ಕೂಡ ಇಲ್ಲಿನ ಸೈನ್ಸ್ ರೀಸರ್ಚ್ ಕ್ಯಾಂಪ್ ವಿದ್ಯಾರ್ಥಿಗಳಾಗಿದ್ದಾರೆ.  ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಇಲ್ಲಿನ ಸುದ್ದಿವಾಹಿನಿಗಳು ವರದಿ ಮಾಡಿವೆ. 

ಇರಾನ್ ವಿಶ್ವದಲ್ಲೇ ಅತೀ ಹೆಚ್ಚು ಅಪಘಾತವಾಗುವ ದೇಶಗಳ ಸಾಲಿನಲ್ಲಿ 7 ನೇ ಸ್ಥಾನದಲ್ಲಿದೆ. ಇಲ್ಲಿನ ರಸ್ತೆಗಳು ಅತ್ಯಂತ ಅಪಾಯಕಾರಿಯಾಗಿದ್ದು,  ಕಳೆದ ವರ್ಷ ಅಪಘಾತದಲ್ಲಿ 16 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.