ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಅಂತರ್ ನಿಗಮ ವರ್ಗಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇನ್ನೆರಡು ದಿನಗಳಲ್ಲಿ ವರ್ಗಾವಣೆಗೆ ಅರ್ಹ ನೌಕರರ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶ ಕರು ಬು‘ವಾರ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಅರ್ಹ ನೌಕರರ ಪಟ್ಟಿ ಪ್ರಕಟಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು(ಆ.24): ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಅಂತರ್ ನಿಗಮ ವರ್ಗಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇನ್ನೆರಡು ದಿನಗಳಲ್ಲಿ ವರ್ಗಾವಣೆಗೆ ಅರ್ಹ ನೌಕರರ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶ ಕರು ಬು‘ವಾರ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಅರ್ಹ ನೌಕರರ ಪಟ್ಟಿ ಪ್ರಕಟಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

 ಬಿಎಂಟಿಸಿ, ಕೆಎಸ್‌'ಆರ್'ಟಿಸಿ ಸೇರಿ 4 ನಿಗಮಗಳಿಂದ 19414 ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಬಿಎಂಟಿಸಿ ಯಿಂದ 10192, ಕೆಸ್ ಆರ್‌ಟಿಸಿಯಿಂದ 5732,ಈಶಾನ್ಯ-1368, ವಾಯವ್ಯ ನಿಗಮದಿಂದ 1645 ನೌಕರರು ಅರ್ಜಿ ಸಲ್ಲಿಸಿದ್ದರು. ವರ್ಗಾವಣೆ ಪ್ರಕ್ರಿಯೆಯಲ್ಲಿ ಸೇವಾ ಹಿರಿತನಕ್ಕೆ ಮೊದಲ ಆದ್ಯತೆ ನೀಡಲಾಗಿದೆ.

4 ನಿಗಮಗಳಲ್ಲಿ ಹಾಲಿ ಖಾಲಿ ಇರುವ ಹುದ್ದೆಗಳು ಹಾಗೂ ವರ್ಗಾವಣೆಯಿಂದ ಖಾಲಿಯಾಗುವ ಹುದ್ದೆಗಳ ಆಧಾರದ ಮೇಲೆ ನೌಕರರನ್ನು ವರ್ಗಾವಣೆ ಮಾಡಲಾಗುತ್ತಿದೆ. ಹಾಗಾಗಿ ಅರ್ಜಿ ಸಲ್ಲಿಸಿದ ಎಲ್ಲ ನೌಕರರಿಗೂ ವರ್ಗಾವಣೆ ಭಾಗ್ಯ ಸಿಗುವುದಿಲ್ಲ. ಹೀಗಾಗಿ ಮುಂದೆ ಹುದ್ದೆಗಳು ಖಾಲಿಯಾದಾಗ ಸೇವಾ ಹಿರಿತನದ ಆಧಾರದಲ್ಲಿ ಉಳಿದವರನ್ನು ವರ್ಗಾವಣೆ ಮಾಡಬೇಕೆಂದು ನೌಕರರು ಆಗ್ರಹಿಸಿದ್ದಾರೆ.

ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಬ್ಬದೊಳಗೆ ವರ್ಗಾವಣೆಗೆ ಅರ್ಹರಾದ ನೌಕರರ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ.