ಬೆಂಗಳೂರು :  ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಚಾಂದ್ ಪುರದಲ್ಲಿ ನಡೆದಿದೆ. 

ಚಂದ್ರಾಪುರ ಜಿಲ್ಲೆಯ ಕೊರ್ಪಾಣ ಪ್ರದೇಶದಲ್ಲಿ ವೇಗವಾಗಿ ಬರುತ್ತಿದ್ದ ಟ್ರಕ್ ಹಾಗೂ  ವ್ಯಾನ್ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. 

ಮೃತರಲ್ಲಿ 7 ಮಂದಿ ಮಹಿಳೆಯರಾಗಿದ್ದು, ಇಬ್ಬರು ಮಕ್ಕಳು ಹಾಗೂ ಚಾಲಕ ಮೃತಪಟ್ಟಿದ್ದಾರೆ. 

ನಾಳ್ವರು ಗಾಯಾಳುಗಳ ಸ್ಥಿತಿಯೂ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

"