ಬೆಂಗಳೂರು (ಆ. 07): ಮಳೆ ಹಿನ್ನೆಲೆಯಲ್ಲಿ ಬುಧವಾರ 11 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಳಗಾವಿ, ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಬುಧವಾರ ರಜೆ ಘೋಷಿಸಲಾಗಿದೆ.

ಉಳಿದಂತೆ ಮುಧೋಳ, ಜಮಖಂಡಿ, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ತಾಲೂಕಿನಲ್ಲಿ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕಿನಲ್ಲಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಭದ್ರಾವತಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ.