ಬೆಚ್ಚಿ ಬಿದ್ದ ರಾಷ್ಟ್ರ ರಾಜಧಾನಿ ನವದೆಹಲಿಒಂದೇ ಕುಟುಂಬದ 11 ಜನರ ಮೃತದೇಹ ಪತ್ತೆ7 ಮಹಿಳೆಯರು, 4 ಪುರುಷರ ಮೃತದೇಹಇದೇನು ಆತ್ಮಹತ್ಯೆಯೋ, ಕೊಲೆಯೋ?
ನವದೆಹಲಿ(ಜು.1): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ 11 ಮಂದಿಯ ಮೃತದೇಹಗಳು ಮನೆಯೊಂದರಲ್ಲಿ ಪತ್ತೆಯಾಗಿವೆ.
ದೆಹಲಿಯ ಬುರಾರಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ 7 ಮಂದಿ ಮಹಿಳೆಯರು ಹಾಗೂ ನಾಲ್ವರು ಪುರುಷರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಮೃತ ಕುಟುಂಬದವರು ಪೀಠೋಪಕರಣ ಮತ್ತು ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದರು. ಪ್ರಾಥಮಿಕ ತನಿಖಾ ವರದಿಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
