ಡಿಸಿಪಿ ಮಂಜುನಾಥ್ ನೇತೃತ್ವದಲ್ಲಿ ನಗರದ ಕಾಳಿದಾಸ ನಗರ, ಅರವಿಂದ್ ನಗರ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ(ಆ.29): ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿದಂತೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡ 12 ಮಂದಿಯನ್ನು ಚಿಕ್ಕಮಗಳೂರು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.ಡಿಸಿಪಿ ಮಂಜುನಾಥ್ ನೇತೃತ್ವದಲ್ಲಿ ನಗರದ ಕಾಳಿದಾಸ ನಗರ, ಅರವಿಂದ್ ನಗರ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದರು. ಇನ್ನು ಈ ಕೃತ್ಯಕ್ಕೆ ಸಹಕರಿಸಿದ ಪೊಲೀಸ್ ಪೇದೆಗಳಾದ ಹರೀಶ್, ಹುಸೇನ್'ರನ್ನು ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
