ಭೀಕರ ಅಪಘಾತ : 12 ಮಂದಿ ಸ್ಥಳದಲ್ಲೇ ಸಾವು

12 Killed on Way to Relative’s Funeral in MP
Highlights

ಟ್ರಾಕ್ಟರ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಮೊರಿನಾ ಪ್ರದೇಶದಲ್ಲಿ ನಡೆದಿದೆ.

ಭೋಪಾಲ್ : ಟ್ರಾಕ್ಟರ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಮೊರಿನಾ ಪ್ರದೇಶದಲ್ಲಿ ನಡೆದಿದೆ. 

ಇನ್ನು ಈ ವೇಳೆ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಬಂಧಿಯೋರ್ವರ ಶವ ಸಂಸ್ಕಾರಕ್ಕೆಂದು ಕುಟುಂಬಸ್ಥರು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಈಗಾಗಲೇ ತನಿಖೆಗೆ ಆದೇಶ ನೀಡಿದ್ದಾರೆ. ವರದಿಗಳ ಪ್ರಕಾರ ಟ್ರಾಕ್ಟರ್ ನಲ್ಲಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು ಎನ್ನಲಾಗಿದೆ. 
 

loader