ಕರ್ನೂಲ್, [ಮೇ.11]: ಎಸ್‌ಆರ್‌ಎಸ್ ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಇಂದು[ಶನಿವಾರ] ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ತಿಯಲ್ಲಿ ಸಂಭವಿಸಿದೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಎಸ್ಆರ್ ಎಸ್ ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ 13 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ.

ಮೃತಪಟ್ಟವರು ಹೆಸರು, ವಿಳಾಸ ಬಗ್ಗೆ ಮಾಹಿತಿ ಸಿಕ್ಕಿಲ್ಲದಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.