ಮಹಿಳಾ ಪ್ರಯಾಣಿಕರ ಆಸನದಲ್ಲಿ ಕುಳಿತ ಪ್ರಯಾಣಿಸಿದ 414 ಪುರುಷ ಪ್ರಯಾಣಿಕರಿಂದ 41 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.
ಬೆಂಗಳೂರು(ಆ.17): ಜುಲೈ ತಿಂಗಳಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 7922 ಪ್ರಯಾಣಿಕರಿಂದ 13.45 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ.
ನಗರದ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಿ 22,457 ಟ್ರಿಪ್‌ಗಳನ್ನು ತಪಾಸಣೆ ಮಾಡಿರುವ ಬಿಎಂಟಿಸಿ ತನಿಖಾಧಿಕಾರಿಗಳು, ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ್ದು, ನಿರ್ವಾಹಕರ ಮೇಲೆ 2,601 ಪ್ರಕರಣ ದಾಖಲಿಸಿದ್ದಾರೆ. ಇದರ ಜತೆಗೆ ಮಹಿಳಾ ಪ್ರಯಾಣಿಕರ ಆಸನದಲ್ಲಿ ಕುಳಿತ ಪ್ರಯಾಣಿಸಿದ 414 ಪುರುಷ ಪ್ರಯಾಣಿಕರಿಂದ 41 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.
