ಬೆಂಗಳೂರು [ಆ.08]: ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗದಲ್ಲಿ ಗಾಳಿ, ಮಳೆಯ ಅಬ್ಬರ  ಮುಂದುವರಿದಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಗುರುವಾರ 12 ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. 

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಆ.10ರವರೆಗೆ ರಜೆ ಘೋಷಿಸಲಾಗಿದೆ. ಕೊಡಗು, ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ರಜೆ ಘೋಷಿಸಲಾಗಿದೆ. 

ಉಳಿದಂತೆ ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಎಚ್‌.ಡಿ.ಕೋಟೆ ತಾಲೂಕಿನಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಎನ್‌.ಆರ್‌.ಪುರ, ಕೊಪ್ಪ ತಾಲೂಕಿನಲ್ಲಿ, ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನಲ್ಲಿ, ಗದಗ ಜಿಲ್ಲೆ ರೋಣ, ನರಗುಂದ ತಾಲೂಕುಗಳಲ್ಲಿ ಮತ್ತು ಶಿರಹಟ್ಟಿತಾಲೂಕಿನ ಗ್ರಾಮೀಣ ಭಾಗಕ್ಕೆ ಗುರುವಾರ ರಜೆ ಘೋಷಿಸಲಾಗಿದೆ.