Asianet Suvarna News Asianet Suvarna News

14 ಮಂದಿ ನಕ್ಸಲರ ಎನ್ ಕೌಂಟರ್

ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 15 ಮಂದಿ ನಕ್ಸಲರ ಹತ್ಯೆಯಾಗಿರುವ ಘಟನೆ ಚತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. 

14 Maoists killed in encounter
Author
Bengaluru, First Published Aug 6, 2018, 4:06 PM IST

ಸುಕ್ಮಾ : ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 14 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಚತ್ತೀಸ್ ಗಢದ ಸುಕ್ಮಾ ಜಿಲ್ಲೆಯ ಬಸ್ತಾರ್ ಪ್ರದೇಶದಲ್ಲಿ ನಕ್ಸಲರ  ಎನ್ ಕೌಂಟರ್ ನಡೆದಿದೆ. 

ಚತ್ತೀಸ್ ಗಢದಲ್ಲಿ ಭದ್ರತಾ ಪಡೆ ಯೋಧರು ನಕ್ಸಲ್ ಕೂಂಬಿಂಗ್ ನಡೆಸಿದ್ದು ಈ ವೇಳೆ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ  ಪರಸ್ಪರ ಗುಂಡಿನ ಚಕಮಕಿ ನಡೆದಿದೆ. 

ಸ್ಥಳದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ನಕ್ಸಲರು ಬೀಡುಬಿಟ್ಟಿರುವ ಬಗ್ಗೆ ಗುಪ್ತಚರ ಸಂಸ್ಥೆಗಳ ಮಾಹಿತಿಯನ್ನು ಆಧರಿಸಿಯೇ ಭದ್ರತಾ ಪಡೆಗಳು ಸ್ಥಳದಲ್ಲಿ ಕೂಂಬಿಂಗ್ ಆರಂಭಿಸಿದ್ದವು. 

ಸಿಆರ್ ಪಿಎಫ್ ಹಾಗೂ ಜಿಲ್ಲಾ ಮೀಸಲು ಪೊಲೀಸ್ ಪಡೆ, ವಿಶೇಷ ಕಾರ್ಯಪಡೆ ನಕ್ಸಲರ ವಿರುದ್ಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. 

ನಕ್ಸಲ್ ವಿರುದ್ಧ ಕಾರ್ಯಾಚರಣೆ ಸದ್ಯಕ್ಕೆ ಅಂತ್ಯವಾಗಿದ್ದು, ಅತ್ಯಂತ  ಗುಡ್ಡಗಾಡು ಪ್ರದೇಶಗಳಲ್ಲಿ ಬಿದ್ದಿರುವ ಮೃತದೇಹಗಳನ್ನು ತೆರವುಗೊಳಿಸಲಾಗಿದೆ. 

ಈ ವೇಳೆ ಅವರ ಬಳಿ ಇದ್ದ ಅತ್ಯಧಿಕ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow Us:
Download App:
  • android
  • ios