ಮುಂಬೈ : ಮಹಾರಾಷ್ಟ್ರದಲ್ಲಿ ಕೆಂಪು ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಪೊಲೀಸ್ ಹಾಗೂ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 15 ಯೋಧರು ಹುತಾತ್ಮರಾಗಿದ್ದಾರೆ.

"

ಮಹಾರಾಷ್ಟ್ರ ಗಡ್‌ಚಿರೋಲಿ ಪ್ರದೇಶದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದರಿಂದ ಈ ದುರಂತ ಸಂಭವಿಸಿದೆ. ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ವಾಹನ ಗುರಿಯಾಗಿಸಿಕೊಂಡು ಕಳೆದ 24 ಗಂಟೆಯಲ್ಲಿ 2ನೇ ಬಾರಿಗೆ ಐಇಡಿ ಸ್ಫೋಟಿಸಲಾಗಿದೆ.

ಸ್ಫೋಟದ ತೀವ್ರತೆಗೆ ವಾಹನಗಳು ಹೊತ್ತಿ ಉರಿದಿವೆ. ಮಹಾರಾಷ್ಟ್ರ ದಿನ ಹಾಗೂ ಕಾರ್ಮಿಕ ದಿನ ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಫೆಬ್ರವರಿ 14ರಂದು ಪುಲ್ವಾಮದಲ್ಲಿ ಉಗ್ರರ ದಾಳಿಗೆ 40 ಯೋಧರು ಹುತಾತ್ಮರಾದ ನೋವು ಮಾಸುವ ಮುನ್ನವೇ ಈ ಘಟನೆ ನಡೆದಿದೆ.