Asianet Suvarna News Asianet Suvarna News

ಇಂದು ಖಾತೆ ಹಂಚಿಕೆ ಖಚಿತ; ಯಡಿಯೂರಪ್ಪ

ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

17 New Ministers likely to allocated cabinet Portfolios on august 25 th
Author
Bengaluru, First Published Aug 25, 2019, 8:20 AM IST
  • Facebook
  • Twitter
  • Whatsapp

ಬೆಂಗಳೂರು (ಆ. 25): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ಸಚಿವರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬ ಪಟ್ಟಿ ಅಂತಿಮಗೊಳಿಸಲಾಗಿದೆ. ಭಾನುವಾರ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಶನಿವಾರವೇ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆದರೆ, ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಭಾನುವಾರ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ ಎಂದರು.

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಜತೆ ಚರ್ಚಿಸಿ ಎಲ್ಲವನ್ನೂ ಅಂತಿಮಗೊಳಿಸಲಾಗಿದೆ. ಯಾರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬುದನ್ನು ಅಂತಿಮ ಮಾಡಲಾಗಿದೆ. ರಾಜ್ಯಪಾಲರಿಂದ ಅನುಮೋದನೆ ಪಡೆದು ಮುಂದಿನ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಹೇಳಿದರು.

 

Follow Us:
Download App:
  • android
  • ios