ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರಿಗೆ ಕರ್ತವ್ಯಲೋಪ ಆರೋಪ ಸಂಬಂಧ ನೋಟಿಸ್ ಜಾರಿಗೊಳಿಸಲಾಗಿತ್ತು.
ಬೆಂಗಳೂರು(ಮಾ.22): ಅನಧಿಕೃತವಾಗಿ 120 ದಿನಗಳಿಗಿಂತ ಹೆಚ್ಚಾಗಿ ಗೈರು ಹಾಜರಾದ 181 ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರನ್ನು ಕರ್ತವ್ಯಲೋಪ ಆರೋಪದ ಮೇಲೆ ಸರ್ಕಾರಿ ಸೇವೆಯಿಂದ ವಜಾ ಮಾಡಿ ಆರೋಗ್ಯ ಇಲಾಖೆ ಆಯುಕ್ತ ಸುಬೋಧ್ ಯಾದವ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರಿಗೆ ಕರ್ತವ್ಯಲೋಪ ಆರೋಪ ಸಂಬಂಧ ನೋಟಿಸ್ ಜಾರಿಗೊಳಿಸಲಾಗಿತ್ತು. 120 ದಿನಗಳಿಗಿಂತ ಹೆಚ್ಚು ಕಾಲ ಅನಧಿಕೃತವಾಗಿ ಕರ್ತವ್ಯಕ್ಕೆ ಹಾಜರಾಗಿದ್ದ 210 ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಈ ಪೈಕಿ 21 ಮಂದಿ ಕರ್ತವ್ಯಕ್ಕೆ ಹಾಜರಾಗಲು ಮುಂದಾಗಿ, ಸ್ಥಳ ನಿಯುಕ್ತಿ ಕೋರಿದ್ದಾರೆ. ಕೆಲವರು ಕರ್ತವ್ಯಕ್ಕೆ ಹಾಜರಾಗಲು ಕಾಲಾವಕಾಶ ಕೋರಿದರೆ, ಇನ್ನು ಕೆಲವರು ಸಾವನ್ನಪ್ಪಿದ್ದಾರೆ. ಉಳಿದ 181 ಮಂದಿ ನೋಟಿಸ್‌ಗೆ ಯಾವುದೆ ಉತ್ತರ ನೀಡದ ಕಾರಣ ಅವರನ್ನು ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
