ಯಮುನಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ  22 ಮಂದಿ ನೀರು ಪಾಲಾಗಿರುವ ಘಟನೆ ನಡೆದಿದೆ. 60 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮಗುಚಿದ್ದು ಕೆಲವರನ್ನು ರಕ್ಷಿಸಲಾಗಿದೆ.

ಉತ್ತರಪ್ರದೇಶ (ಸೆ.14):  ಯಮುನಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 22 ಮಂದಿ ನೀರು ಪಾಲಾಗಿರುವ ಘಟನೆ ನಡೆದಿದೆ.60 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮಗುಚಿದ್ದು ಕೆಲವರನ್ನು ರಕ್ಷಿಸಲಾಗಿದೆ.

ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಆಗಮಿಸಿದ್ದು ರಕ್ಷಣಾ ಕಾರ್ಯ ನಿರತರಾಗಿದ್ದಾರೆ.ಇದುವರೆಗೆ 25ಮಂದಿಯನ್ನು ರಕ್ಷಿಸಲಾಗಿದ್ದು,ಅವರಲ್ಲಿ 16 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೀರು ಪಾಲಾದವರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.ಮೃತಪಟ್ಟವರಲ್ಲಿ ಹೆಚ್ಚಿನವರು ಕೂಲಿ ಕಾರ್ಮಿಕರು. ಅವರೆಲ್ಲರೂ ಕಥಾ ಗ್ರಾಮದಿಂದ ಹರ್ಯಾಣದ ಸೋನಿಪತ್‌ಗೆ ಕೆಲಸ ಹುಡುಕಿಕೊಂಡು ಹೊರಟಿದ್ದರು ಎನ್ನಲಾಗಿದೆ. ಇನ್ನು ಮೃತರ ಕುಟುಂಬಗಳಿಗೆ ಯುಪಿ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಚಿತ್ರಕೃಪೆ : (ಹಿಂದೂಸ್ಥಾನ್ ಟೈಮ್ಸ್)