ಬೆಂಗಳೂರು: ತಮಿಳುನಾಡಿನಲ್ಲಿ 19 ಉಗ್ರರು ಅಡಗಿದ್ದಾರೆ, ದಕ್ಷಿಣ ರಾಜ್ಯಗಳ ಮೇಲೆ ದಾಳಿಗೆ ಸಜ್ಜಾಗಿದ್ದಾರೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿ ಹೇಳಿದ್ದು, ಎಲ್ಲ ರಾಜ್ಯಗಳ ಡಿಜಿಪಿಗಳು ಹೈ ಅಲರ್ಟ್‌ ಘೋಷಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿದ ವ್ಯಕ್ತಿಯು ತಮಿಳುನಾಡಿನಲ್ಲಿ ಉಗ್ರರು ಅಡಗಿದ್ದಾರೆ ಎಂದು ಮಾಹಿತಿ ನೀಡಿದ್ದಾನೆ. ಈ ಮಾಹಿತಿಯನ್ನು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರು ತಮಿಳುನಾಡು, ಗೋವಾ, ಕೇರಳ, ಆಂಧ್ರ, ಮಹಾರಾಷ್ಟ್ರ, ತೆಲಂಗಾಣ, ಪುದುಚೇರಿ ರಾಜ್ಯಗಳ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. 

ಅಲ್ಲದೆ ರಾಜ್ಯ ಪೊಲೀಸರಿಗೂ ಕಟ್ಟೆಚ್ಚರ ವಹಿಸಬೇಕು ಎಂದು ಸಕ್ರ್ಯೂಲರ್‌ ಹೊರಡಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯು ನೀಡಿದ ಮಾಹಿತಿಯ ಸತ್ಯಾಸತ್ಯತೆ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ನೀಲಮಣಿ ರಾಜು ಅವರ ಸಹಿ ಇರುವ ಸಕ್ರ್ಯೂಲರ್‌ ಪ್ರತಿಯೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.