ಜಿಲ್ಲಾಡಳಿತ ಹಾಗೂ ರೈಲ್ವೆ ಅಧಿಕಾರಿಗಳು ಪರಿಹಾರ ಹಾಗೂ ನೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಆದಾಗ್ಯೂ ಹೆಚ್ಚಿನ ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಲಿವೆ. ಗಾಯಗೊಂಡವರಿಗೆ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ

ಕಾನ್ಪುರ(ಡಿ.28): ಇಲ್ಲಿನ ದೇಹತ್'ನ ರೂರಾ-ಮೀರತ್ ನಡುವೆ ಸಂಚರಿಸುತ್ತಿದ್ದ ಸೇಲ್ದ-ಅಜ್ಮೇರ್ ಎಕ್ಸ್'ಪ್ರಸ್ ರೈಲಿನ 15 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. ಕಾನ್ಪುರರಿಂದ 50 ಕಿ.ಮೀ ದೂರದಲ್ಲಿರುವ ದೇಹತ್'ನಲ್ಲಿ ಮುಂಜಾನೆ 5.20ಕ್ಕೆ ಘಟನೆ ಸಂಭವಿಸಿದೆ ಎಂದು ಕಾನ್ಪುರದ ರೈಲು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಜಿಲ್ಲಾಡಳಿತ ಹಾಗೂ ರೈಲ್ವೆ ಅಧಿಕಾರಿಗಳು ಪರಿಹಾರ ಹಾಗೂ ನೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಆದಾಗ್ಯೂ ಹೆಚ್ಚಿನ ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಲಿವೆ. ಗಾಯಗೊಂಡವರಿಗೆ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಆ ರೈಲಿನಲ್ಲಿ ಪ್ರಯಾಣಿಸುತ್ತಿರುವವರನ್ನು ಬೇರೆ ರೈಲಿಗೆ ಸ್ಥಳಾಂತರಿಸಲಾಗಿದೆ ಜೊತೆಗೆ ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆಯನ್ನು ಆದೇಶಿಸಲಾಗಿದೆ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಟ್ವಿಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ರೈಲ್ವೆ ಇಲಾಖೆ ಗಾಯಗೊಂಡವರ ನೆರವಿಗಾಗಿ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ಸಂಬಂಧಿಸಿದವರು: 09935024350 ಹಾಗೂ 0979485953 ಸಂಪರ್ಕಿಸಬಹುದು.